newsics.com
ಕಾಬೂಲ್: ಅಪ್ಘಾನಿಸ್ತಾನದ ಕಾಬೂಲ್ ನಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಟ ಎಂಟು ಮಂದಿ ಮೃತಪಟ್ಟಿದ್ದಾರೆ. ಸ್ಫೋಟದಲ್ಲಿ 18 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.
ಇಸ್ಲಾಮಿಕ್ ಸ್ಟೇಟ್ ಈ ಕೃತ್ಯದ ಹೊಣೆ ಹೊತ್ತುಕೊಂಡಿದೆ.
ಇನ್ನೊಂದೆಡೆ ಪ್ಯಾಲೆಸ್ತೀನ್ ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ದಾಳಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಪ್ಯಾಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಮೂವ್ ಮೆಂಟ್ ನ ಹಿರಿಯ ಕಮಾಂಡರ್ ಕೂಡ ಸೇರಿದ್ದಾನೆ ಎಂದು ವರದಿಯಾಗಿದೆ