Monday, April 12, 2021

ನಾಳೆ ಬೋಲ್ಟನ್‌ರ ಹೊಸ ಪುಸ್ತಕ ಬಿಡುಗಡೆ; ಟ್ರಂಪ್’ಗೆ ಟೆನ್ಶನ್

ವಾಶಿಂಗ್ಟನ್: ಡೊನಾಲ್ಡ್ ಟ್ರಂಪ್ ಅವರ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್‌ರ ಹೊಸ ಪುಸ್ತಕದ ಬಿಡುಗಡೆಯನ್ನು ತಡೆಯಲು ಅಮೆರಿಕದ ನ್ಯಾಯಾಲಯ ನಿರಾಕರಿಸಿದೆ.
ಹೀಗಾಗಿ ಜಾನ್ ಬೋಲ್ಟನ್‌ರ ಪುಸ್ತಕ ‘ದ ರೂಮ್ ವೇರ್ ಇಟ್ ಹ್ಯಾಪನ್ಡ್’ ಮಂಗಳವಾರ (ಜೂನ್ 23) ಅಮೆರಿಕದಲ್ಲಿ ಬಿಡುಗಡೆಯಾಗಲಿದೆ.
ಪುಸ್ತಕದಲ್ಲಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಚಾರಗಳಿಲ್ಲ ಎಂಬ ಬಗ್ಗೆ ಶ್ವೇತಭವನಕ್ಕೆ ಮನವರಿಕೆ ಮಾಡಿ ಅನುಮತಿ ತೆಗೆದುಕೊಳ್ಳುವಲ್ಲಿ ಬೋಲ್ಟನ್ ವಿಫಲರಾಗಿದ್ದಾರೆ. ಪುಸ್ತಕದ ಬಿಡುಗಡೆಗೆ ತಡೆಯೊಡ್ಡುವುದೇ ಸೂಕ್ತ ಪರಿಹಾರ ಎನ್ನುವುದನ್ನು ಸಾಬೀತುಪಡಿಸುವಲ್ಲಿ ಸರ್ಕಾರವೂ ವಿಫಲವಾಗಿದೆ ಎಂದು ನ್ಯಾಯಾಧೀಶ ರಾಯ್ಸಾ ಲ್ಯಾಂಬರ್ಟ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ. ತನ್ನ ಪುಸ್ತಕದಲ್ಲಿ ಬೋಲ್ಟನ್ ಟ್ರಂಪ್‌ರನ್ನು ಅಸಮರ್ಥ ಹಾಗೂ ಭ್ರಷ್ಟ ಎಂಬುದಾಗಿ ಬಣ್ಣಿಸಿದ್ದಾರೆ ಎಂದು ಹೇಳಲಾಗಿದೆ. ಅಧ್ಯಕ್ಷೀಯ ಚುನಾವಣೆ ಹತ್ತಿರ ಬರುತ್ತಿದ್ದಂತೆ, ಟ್ರಂಪ್‌ರನ್ನು ಇಕ್ಕಟ್ಟಿಗೆ ಸಿಲುಕಿಸಬಹುದಾದ ಹಲವು ಘಟನೆಗಳನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!