newsics.com
ಕರಾಚಿ: ಬಾಂಬ್ ಸ್ಫೋಟ ಸಂಭವಿಸಿ 34 ಜನರು ಮೃತಪಟ್ಟು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.
ಈದ್ ಮಿಲಾದ್ ಹಬ್ಬದ ಅಂಗವಾಗಿ ಬಲೂಚಿಸ್ತಾನ್ ಮಸ್ತುಂಗ್ ಜಿಲ್ಲೆಯ ಮಸೀದಿಯ ಬಳಿ ಭಾರೀ ಜನ ಸೇರಿದ್ದರು. ಈ ವೇಳೆ ಸ್ಫೋಟ ಸಂಭವಿಸಿದ್ದು, ಮಸ್ತುಂಗ್‌ನ ಡಿಎಸ್‌ಪಿ ನವಾಜ್ ಗಶ್ಕೋರಿ ಕೂಡ ಸೇರಿ 34 ಜನ ಅಸುನೀಗಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸ್ಫೋಟದ ಹೊಣೆಯನ್ನು ಈವರೆಗೆ ಯಾರೂ ಹೊತ್ತುಕೊಂಡಿಲ್ಲ.
ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ: ಶಿಕ್ಷಕಿ ಬಂಧನ