Monday, October 3, 2022

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

Follow Us

newsics.com

ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ ಜನರು ಮಗ್ರಿಬ್ ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಬಾಂಬ್ ಸ್ಫೋಟಗೊಂಡಿದೆ. ಭದ್ರತಾ ಇಲಾಖೆಯ ವಕ್ತಾರ ಖಾಲಿದ್ ಜದ್ರಾನ್ ಬಾಂಬ್ ಸ್ಫೋಟದ ಬಗ್ಗೆ ಖಚಿತಪಡಿಸಿದ್ದಾರೆ. ಮಸೀದಿಯ ಇಮಾಮ್, ಮೌಲಾವಿ ಅಮೀರ್ ಮೊಹಮ್ಮದ್ ಕಾಬೂಲಿ ಕೂಡ ಈ ಸ್ಫೋಟದಲ್ಲಿ ಅಸುನೀಗಿದ್ದಾರೆ.

ಆಗಸ್ಟ್ 6ರಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನ ಮಸೀದಿಯೊಂದರ ಬಳಿ ಕಾರ್ಟ್‌ನಲ್ಲಿ ಅಡಗಿಸಿಟ್ಟಿದ್ದ ಬಾಂಬ್ ಸ್ಫೋಟಗೊಂಡು 8 ಜನರು ಸಾವನ್ನಪ್ಪಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!