Wednesday, November 30, 2022

ಮುಂಬೈ ದಾಳಿ ಆರೋಪಿ ಹಫೀಜ್ ಮನೆ ಬಳಿ‌ ಭಾರೀ ಸ್ಫೋಟ, ಇಬ್ಬರ ಸಾವು, 16 ಮಂದಿಗೆ ಗಾಯ

Follow Us

newsics.com

ಲಾಹೋರ್(ಪಾಕಿಸ್ತಾನ): ಮುಂಬೈ ದಾಳಿಯ ಪ್ರಮುಖ‌ ಆರೋಪಿ ಹಫೀಜ್ ಸಯೀದ್ ಮನೆ ಬಳಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದಾರೆ.

ಸ್ಫೋಟಕ್ಕೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಸ್ಫೋಟಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಗಾಯಾಳುಗಳನ್ನು ಜಿನ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ವ್ಯಕ್ತಿಯೊಬ್ಬ ಮನೆಯ ಬಳಿ ದ್ವಿಚಕ್ರ ವಾಹನ ಪಾರ್ಕ್ ಮಾಡಿದ ಕೂಡಲೇ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಹತ್ತಿರದ ಮನೆಗಳು ಮತ್ತು ಕಟ್ಟಡಗಳ ಗಾಜಿನ ಕಿಟಕಿಗಳು ಒಡೆದು ಹೋಗಿವೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮುಂಬೈ ದಾಳಿಯ ಪ್ರಮುಖ ಆರೋಪಿ ಲಷ್ಕರ್ ತೊಯ್ಬಾ ಸಂಘಟನೆ ಮತ್ತು ಜಮಾತ್-ಉದ್-ದವಾಹ್ (ಜುಡಿ) ಮುಖ್ಯಸ್ಥ ಹಫೀಜ್ ಸಯೀದ್ ನಿವಾಸದಿಂದ 120 ಮೀಟರ್ ದೂರದಲ್ಲಿ ಈ ಸ್ಫೋಟ ಸಂಭವಿಸಿದೆ.

ಗರ್ಲ್ ಫ್ರೆಂಡ್’ಗಾಗಿ ಸೋನು ಸೂದ್ ಬಳಿ ಐ ಫೋನ್ ಕೇಳಿದ ಯುವಕ

ಉದ್ದದ ನಾಲಿಗೆಯಿಂದ ಪ್ರವೀಣ್ ಪ್ರಸಿದ್ಧಿ!

ಬೆನ್ನಲ್ಲಿ ಮಗು, ಹೆಗಲಲ್ಲಿ ಲಸಿಕೆ ಬ್ಯಾಗ್… ನದಿ ದಾಟಿದ ಮಂತಿ ಕುಮಾರಿ ಕರ್ತವ್ಯನಿಷ್ಠೆಗೆ ಸಲಾಂ…

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!