Saturday, April 17, 2021

ತಮ್ಮ ಜೀವ ಉಳಿಸಿದ ವೈದ್ಯರ ಹೆಸರನ್ನೇ ಮಗನಿಗಿಟ್ಟ ಬ್ರಿಟನ್ ಪ್ರಧಾನಿ!

ಲಂಡನ್: ಕೊರೋನಾ ಸೋಂಕಿಗೆ ಒಳಗಾಗಿ ಗುಣಮುಖರಾಗಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಮಗನಿಗೆ ವೈದ್ಯರ ಹೆಸರನ್ನೇ ಇಡುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.
ಕೋವಿಡ್-19 ಸೋಂಕು ತಗುಲಿದ್ದ ತಮಗೆ ವೈದ್ಯರು ಅದ್ಬುತ ಸೇವೆ ಕಲ್ಪಿಸಿದ್ದರು ಎಂದು ವೈದ್ಯರ ಬಗ್ಗೆ ಪ್ರಶಂಸಿಸಿದ್ದಾರೆ.
ತುರ್ತು ಚಿಕಿತ್ಸಾ ಘಟಕದಲ್ಲಿ ತಮ್ಮನ್ನು ಇರಿಸಿ, ಆಗಾಗ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದರು, ಅವರ ಅದ್ಬುತ ಸೇವೆಯಿಂದಾಗಿ ತಾನು ಸೋಂಕಿನಿಂದ ಚೇತರಿಸಿಕೊಂಡೆ ಎಂದು ಜಾನ್ಸನ್ ಹೇಳಿದ್ದಾರೆ.
ಮಾರ್ಚ್ 26 ರಂದು ಬ್ರಿಟನ್ ಪ್ರಧಾನಿ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಸುಮಾರು 20 ದಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡರು.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!