Tuesday, April 13, 2021

2ನೇ ಪತ್ನಿಗೆ ಡಿವೋರ್ಸ್ ನೀಡಿದ ಬ್ರಿಟನ್ ಪ್ರಧಾನಿ, ಶೀಘ್ರ 3ನೇ ಮದುವೆ!

ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಕೊನೆಗೂ ತಮ್ಮ ಎರಡನೇ ಪತ್ನಿ ಮರಿನಾ ವೀಲರ್ ಗೆ ಅಧಿಕೃತವಾಗಿ ವಿಚ್ಛೇದನ ನೀಡಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದ ವೀಲರ್ ಅವರಿಗೆ ಈಗ ಬೋರಿಸ್ ಅವರಿಂದ ಅಧಿಕೃತವಾಗಿ ಬಿಡುಗಡೆ ಸಿಕ್ಕಿದೆ.
ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ ಕ್ಯಾರಿ ಸಿಮಂಡ್ಸ್ ಅವರೊಂದಿಗೆ ಬೋರಿಸ್ ಅವರು ಮೂರನೇ ಮದುವೆಯಾಗಲಿದ್ದಾರೆ. ಬೋರಿಸ್ ಅವರ ಎರಡನೇ ಪತ್ನಿ ವೀಲರ್ ಗೆ ನಾಲ್ವರು ಮಕ್ಕಳಿದ್ದಾರೆ. ಎರಡನೇ ಪತ್ನಿಯಿಂದ ಜಾನ್ಸನ್ ವಿಚ್ಛೇದನ ಪಡೆದಿದ್ದಾರೆ. ವಿವಾಹೇತರ ಸಂಬಂಧದಲ್ಲಿ ಜಾನ್ಸನ್ ಗೆ ಮತ್ತೊಂದು ಮಗು ಇದೆ.
ಕೊರೋನಾ ವೈರಸ್ ಸೋಂಕಿಗೆ ಒಳಗಾಗಿದ್ದ ಬೋರಿಸ್ ಜಾನ್ಸನ್ ಅವರು ಗುಣಮುಖರಾಗಿ ಏ.27ರಿಂದ ಕರ್ತವ್ಯಕ್ಕೆ ಮರಳಿದ್ದರು.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!