Tuesday, April 13, 2021

ಜನರ ಪ್ರತಿಕ್ರಿಯೆ ತಿಳಿಯಲು ಅಂಗಡಿಗೆ ಭೇಟಿ ನೀಡಿದ ಬ್ರಿಟನ್ ವಿತ್ತ ಸಚಿವ

ಲಂಡನ್: ಕೊರೋನಾ ಹೆಮ್ಮಾರಿಯಿಂದ ನಲುಗಿ ಹೋಗಿದ್ದ ಬ್ರಿಟನ್ ನಲ್ಲಿ ನಿರ್ಬಂಧಗಳನ್ನು ಹಂತ ಹಂತವಾಗಿ ಸಡಿಲಗೊಳಿಸಲಾಗಿದೆ. ಅಂಗಡಿ, ಮಾಲ್ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಎಲ್ಲ ಹಂತದಲ್ಲಿಯೂ ಸಾಮಾಜಿಕ ಅಂತರ ಪಾಲನೆ ಕಡ್ಡಾಯಗೊಳಿಸಲಾಗಿದೆ. ಶುಚಿತ್ವದ ವಿಷಯದಲ್ಲಿ ರಾಜೀ ಮಾಡಬಾರದು ಎಂದು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬ್ರಿಟನ್ ಹಣಕಾಸು ಸಚಿವ ಇನ್ಫಿ‌ ಮೂರ್ತಿ‌ ಅಳಿಯ ರಿಷಿ ಸುನಾಕ್ ನಾರ್ಥಲ್ಟ್’ನ್’ನಲ್ಲಿರುವ ಅಂಗಡಿಯೊಂದಕ್ಕೆ ಭೇಟಿ ನೀಡಿ ಜನರ ಪ್ರತಿಕ್ರಿಯೆ ತಿಳಿಯಲು ಪ್ರಯತ್ನಿಸಿದರು. ಸ್ವತಃ ರಿಷಿ ಸುನಾಕ್ ಈ ಮಾಹಿತಿ ಬಹಿರಂಗಪಡಿಸಿದ್ದಾರೆ. ರಿಷಿ ಸುನಾಕ್ ಅವರಿಗೆ ಕರ್ನಾಟಕದ ಜತೆ ನಿಕಟ ಸಂಬಂಧ ಕೂಡ ಇದೆ. ಅವರು ಇನ್ಫೋಸಿಸ್ ನ ಸುಧಾಮೂರ್ತಿ ಅವರ ಅಳಿಯ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!