ಲಂಡನ್: ಬ್ರಿಟನ್ ನಲ್ಲಿ ಕೊರೋನಾ ಹಾವಳಿ ತೀವ್ರವಾಗಿದೆ, ಕೊರೋನಾ ನಿಯಂತ್ರಿಸಲು ಹೇರಲಾಗಿದ್ದ ಲಾಕ್ ಡೌನ್ ನ್ನು ಹಂತ ಹಂತವಾಗಿ ಸಡಿಲಿಸಲಾಗಿದೆ. ಜನ ಜೀವನ ನಿಧಾನವಾಗಿ ಸಹಜ ಸ್ಥಿತಿ ಮರಳುತ್ತಿದೆ. ಜನರು ಕೊರೋನಾ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸರ್ಕಾರ ಸೂಚಿಸಿದೆ. ಇದನ್ನು ಕಟ್ಟು ನಿಟ್ಟಾಗಿ ಪಾಲಿಸದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ಕೂಡ ನೀಡಲಾಗಿದೆ.
ಈ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸ್ ನ್ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಅಂಗಡಿ ಮಳಿಗೆಯೊಂದಕ್ಕೆ ದಿಢೀರ್ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ಅಲ್ಲಿ ತೆಗೆದುಕೊಳ್ಳಲಾದ ಮುನ್ನೆಚ್ಚರಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಲಂಡನ್ ಸಮೀಪದ ಉಕ್ಸ್ ಬ್ರಿಡ್ಜ್ ಪ್ರದೇಶಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ, ಸಿಬ್ಬಂದಿ ಜತೆ ಮಾತುಕತೆ ನಡೆಸಿದರು. ಜತೆ ಸೆಲ್ಫಿಗೆ ಕೂಡ ಪೋಸ್ ನೀಡಿದರು.