newsics.com
ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ.
ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ ಸಂಸದ ಚಂದ್ರ ಆರ್ಯ ಅವರು ಕನ್ನಡದಲ್ಲಿ ಮಾತನಾಡಿದ್ದಾರೆ.
ಎಲ್ಲಾದರೂ ಇರು, ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಎಂದು ಹೇಳುವ ಮೂಲಕ ಕನ್ನಡದಲ್ಲಿ ತಮ್ಮ ಭಾಷಣವನ್ನು ಮುಗಿಸಿದ್ದಾರೆ.