Wednesday, October 5, 2022

ಕೊನೆಗೂ ನೂತನ ಅಧ್ಯಕ್ಷ ಬೈಡನ್ ಗೆ ಶುಭಕೋರಿದ ಚೀನಾ

Follow Us

NEWSICS.COM

ಯುಎಸ್: ಅಮೆರಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಜೋ ಬೈಡನ್ ಗೆ ಚೀನಾ ಈಗ ಶುಭಕೋರಿದೆ. ಮರು ಮತ ಎಣಿಕೆಯಲ್ಲಿಯೂ ಬೈಡನ ಗೆದ್ದಿದ್ದಾರೆ. ಮೌನ ಮುರಿದ ಚೀನಾ ಈ ಹಿಂದೆ ಹದಗೆಟ್ಟಿದ್ದ ಚೀನಾ ಮತ್ತು ಅಮೆರಿಕ ಸೌಹಾರ್ಧ ಸಂಬಂಧ ಇದೀಗ ನೂತನ ಅಧ್ಯಕ್ಷ ಜೋ ಬೈಡೆನ್ ಅವಧಿಯಲ್ಲಿ ಪುನಃ ಸ್ಥಾಪನೆಯಾಗುವ ವಿಶ್ವಾಸವನ್ನು ಚೀನಾ ವ್ಯಕ್ತಪಡಿಸಿದೆ.

ಈ ಕುರಿತು ಮಾತನಾಡಿದ ಚೀನಾ ವಿದೇಶಾಂಗ ಸಚಿವ ವಾಂಗ್ ವೆನ್ ಬಿನ್, ಅಮೆರಿಕ ಜನರ ಆಯ್ಕೆಯನ್ನು ನಾವು ಗೌರವಿಸುತ್ತೇವೆ. ಬೈಡೆನ್ ಹಾಗೂ ಕಮಲಾ ಹ್ಯಾರಿಸ್ ಗೆ ನಮ್ಮ ಅಭಿನಂದನೆಗಳು. ಅಮೆರಿಕ ಚುನಾವಣೆಯ ಫಲಿತಾಂಶ, ಅಲ್ಲಿನ ಕಾನೂನುಗಳು ಮತ್ತು ಕಾರ್ಯವಿಧಾನಗಳಿಗೆ ಅನುಗುಣವಾಗಿ ನಿರ್ಧರಿಸಲಾಗುತ್ತದೆ ಎಂದು ಚೀನಾ ಅರ್ಥಮಾಡಿಕೊಂಡಿದೆ ಎಂದು ಹೇಳಿದ್ದಾರೆ.
ಹಿಂದೆ ತೆರಿಗೆ ವಿಷಯ ಹಾಗೂ ಕೊರೋನಾ ಸೋಂಕಿನ ಕುರಿತು ಟ್ರಂಪ್ ಹೇಳಿಕೆಯಿಂದ ಅಮೆರಿಕ- ಚೀನಾ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳು ಉಂಟಾಗಿದ್ದವು.

ಪಾಕ್ ಶೆಲ್ ದಾಳಿ: ಮೂವರು ಭದ್ರತಾ ಪಡೆ ಸಿಬ್ಬಂದಿ ಸೇರಿ 6 ಮಂದಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!