Tuesday, April 13, 2021

ಚೀನಾದ ಇಸ್ರೇಲ್ ರಾಯಭಾರಿ ನಿಗೂಢ ಸಾವು

ಟೆಲ್ ಅವೀವ್:  ಚೀನಾದ ಇಸ್ರೇಲ್ ರಾಯಭಾರಿ ತಮ್ಮ ನಿವಾಸದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾವಿನ ಕಾರಣ ಇನ್ನೂ ತಿಳಿದು ಬಂದಿಲ್ಲ. 58 ವರ್ಷ ಪ್ರಾಯದ  ದುವೈ ಫೆಬ್ರವರಿಯಲ್ಲಿ ಚೀನಾದ ಇಸ್ರೇಲ್ ರಾಯಭಾರಿಯಾಗಿ ನೇಮಕಗೊಂಡಿದ್ದರು. ಪ್ರಕರಣ ಕುರಿತು ತನಿಖೆಗೆ ಆದೇಶ ನೀಡಲಾಗಿದೆ ನಿದ್ದೆ ಮಾಡುತ್ತಿದ್ದ ಸಂದರ್ಭದಲ್ಲಿ  ದುವೈಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ತನಿಖೆಯ ಬಳಿಕವಷ್ಟೇ ನಿಜವಾದ ಕಾರಣ ತಿಳಿದು ಬರಲಿದೆ.  ಚೀನಾ ಇಸ್ರೇಲ್ ಜತೆ ಉತ್ತಮ ರಾಜತಾಂತ್ರಿಕ ಸಂಬಂಧ ಹೊಂದಿದೆ. ಇಸ್ರೇಲ್ ನಲ್ಲಿ ಚೀನಾದ ಬಂಡವಾಳ ಹೂಡಿಕೆಯನ್ನು ಅಮೆರಿಕದ ವಿದೇಶಾಂಗ ಸಚಿವ ಪೊಂಪೈ ವಿರೋಧಿಸಿದ ಎರಡು ದಿನಗಳ ಬಳಿಕ   ಚೀನಾದ ರಾಯಭಾರಿ ಸಾವನ್ನಪ್ಪಿದ್ದಾರೆ. ದುವೈ ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!