ಬೀಜಿಂಗ್: ಅರುಣಾಚಲ ಪ್ರದೇಶದಲ್ಲಿ ಬೇಟೆಗೆಂದು ತೆರಳಿದ್ದ ಸಂದರ್ಭದಲ್ಲಿ ವಶಕ್ಕೆ ತೆಗೆದುಕೊಂಡ ಐವರು ಭಾರತೀಯರನ್ನು ಚೀನಾ ಬಿಡುಗಡೆ ಮಾಡಿದೆ. ಭಾರತ ಹೇರಿದ ಸತತ ರಾಜತಾಂತ್ರಿಕ ಒತ್ತಡದ ಪರಿಣಾಮ ಚೀನಾ ಈ ಕ್ರಮ ತೆಗೆದುಕೊಂಡಿದೆ.
ಅರುಣಾಚಲ ಪ್ರದೇಶದಲ್ಲಿ ಕಾಡಿನಲ್ಲಿ ಇವರು ಬೇಟೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಚೀನಾ ಅಧಿಕಾರಿಗಳು ಇವರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು. ಭಾರತ- ಚೀನಾ ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಇದು ಭಾರೀ ಕುತೂಹಲ ಕೆರಳಿಸಿತ್ತು.
ಈ ಮಧ್ಯೆ ನವದೆಹಲಿಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಸಭೆಯಲ್ಲಿ ಭಾರತ- ಚೀನಾ ಗಡಿಯಲ್ಲಿನ ಪ್ರಸಕ್ತ ಪರಿಸ್ಥಿತಿ ಕುರಿತು ಸುದೀರ್ಘ ಸಮಾಲೋಚನೆ ನಡೆದಿದೆ.