newsics.com
ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು 30 ಮಂದಿ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿದ್ದಾರೆ.
ಉತ್ತರ ಮೆಕ್ಸಿಕೋದಲ್ಲಿ ಈ ದುರಂತ ಸಂಭವಿಸಿದ್ದು, ಬದುಕುಳಿದಿರುವವರನ್ನು ಹೊರತರಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಚರ್ಚ್ ಕುಸಿಯುವ ವೇಳೆ ಸುಮಾರು 100 ಜನ ಚರ್ಚ್‌ನೊಳಗಿದ್ದರು ಎಂದು ತಮೌಲಿಪಾಸ್ ರಾಜ್ಯ ಪೊಲೀಸರು ತಿಳಿಸಿದ್ದಾರೆ. ಟ್ಯಾಂಪಿಕೊದ ಪಕ್ಕದಲ್ಲಿರುವ ಗಲ್ಫ್ ಕರಾವಳಿ ನಗರವಾದ ಸಿಯುಡಾಡ್ ಮಡೆರೊದಲ್ಲಿನ ಸಾಂಟಾ ಕ್ರೂಜ್ ಚರ್ಚ್‌ನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಛಾವಣಿ ಕುಸಿದಿದೆ.
ಆಸ್ಪತ್ರೆಗೆ ದಾಖಲಾಗಿರುವ 50 ಗಾಯಾಳುಗಳ ಪೈಕಿ 4 ತಿಂಗಳ ಮಗು, 5 ವರ್ಷದ ಮೂವರು ಮಕ್ಕಳು ಮತ್ತು 9 ವರ್ಷದ ಇಬ್ಬರು ಮಕ್ಕಳು ಕೂಡ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!