Monday, April 12, 2021

ಸೌದಿ ಅರೇಬಿಯಾದಲ್ಲಿ 23ರಿಂದ ಸಂಪೂರ್ಣ ಲಾಕ್ ಡೌನ್

ರಿಯಾದ್: ಪವಿತ್ರ ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಿಂತೆಗೆಯಲಾಗಿದ್ದ ಸಂಪೂರ್ಣ ಲಾಕ್ ಡೌನ್ ನ್ನು ಮೇ 23 ರಿಂದ ಮತ್ತೆ ಜಾರಿಗೆ ತರಲು ಸೌದಿ  ಅರೇಬಿಯಾ ನಿರ್ಧರಿಸಿದೆ. ಮೇ 23 ರಿಂದ 27 ರ ವರೆಗೆ ಇದು ಜಾರಿಯಲ್ಲಿರಲಿದೆ. ಈದ್ ಉಲ್ ಫಿತರ್ ಹಬ್ಬದ ಬಳಿಕ ಈ ಅವಧಿಯಲ್ಲಿ ಸೌದಿಯಲ್ಲಿ ಸಾರ್ವತ್ರಿಕ ರಜೆ. ಇದನ್ನು ಪರಿಗಣಿಸಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗೆ ಬಾರದಿರಲು ಸೌದಿ ಅರೇಬಿಯಾ ಮತ್ತೆ ಸಂಪೂರ್ಣ ಲಾಕ್ ಡೌನ್ ಹೇರಲು ನಿರ್ಧರಿಸಿದೆ. ಅಲ್ಲಿಯ ತನಕ ಅಂದರೆ ಮೇ 23ರ ತನಕ ಯಥಾಸ್ಥಿತಿ ಮುಂದುವರಿಯಲಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಜನರ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ  ಪವಿತ್ರ ಧಾರ್ಮಿಕ ಸ್ಥಳವಾಗಿರುವ ಮೆಕ್ಕಾದಲ್ಲಿ  ನಿರ್ಬಂಧ ಮುಂದುವರಿಯಲಿದೆ. ಕೊರೋನಾಕ್ಕೆ ಸೌದಿ ಅರೆಬೀಯಾದಲ್ಲಿ 264 ಮಂದಿ ಬಲಿಯಾಗಿದ್ದಾರೆ.  42, 925 ಮಂದಿ ಸೌದಿ ಅರೇಬಿಯಾದಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!