newsics.com
ಪ್ಯಾರಿಸ್: ಯುವಜನರಿಗೆ ಕಾಂಡೋಮ್ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ.
ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ ಮಾಡಲು ಮುಂದಿನ ವರ್ಷದಿಂದ ಯುವಜನರಿಗೆ ಕಾಂಡೋಮ್ಗಳನ್ನು ಉಚಿತವಾಗಿ ನೀಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದರು.
ಔಷಧಾಲಯಗಳಲ್ಲಿ ಜನವರಿ 1 ರಿಂದ 18 ರಿಂದ 25 ವರ್ಷ ವಯಸ್ಸಿನವರಿಗೆ ಕಾಂಡೋಮ್ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.