Wednesday, July 6, 2022

ಏಷ್ಯಾ ದೇಶಗಳಲ್ಲಿ ಹೆಚ್ಚು ಕಾಲ ಕೊರೋನಾ ಬಾಧೆ- WHO

Follow Us

ವಿಶ್ವಸಂಸ್ಥೆ: ಏಷ್ಯಾ ದೇಶಗಳಲ್ಲಿ ಕೊರೋನಾ ದೀರ್ಘಕಾಲಿಕವಾಗಿರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ.
ಏಷ್ಯಾದ ದೇಶಗಳ ಸ್ಥಿತಿಗತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆ, ಈ ದೇಶಗಳು ಭಾರಿ ಜನಸಂಖ್ಯೆ ಮತ್ತು ಅಸಮರ್ಪಕ ಆರೋಗ್ಯ ವ್ಯವಸ್ಥೆ ಹೊಂದಿರುವುದರಿಂದ ಏಷ್ಯಾ ದೇಶಗಳಲ್ಲಿ ಕೊರೋನಾ ಹೆಚ್ಚು ಕಾಲ ಇರಲಿದೆ ಎಂದು ತಿಳಿಸಿದೆ.
ಈ ದೇಶಗಳಲ್ಲಿ ಕೊರೋನಾ ಸೋಂಕು ತಡೆಗೆ ಕಠಿಣ ನಿರ್ಬಂಧಗಳ ಹೊರತಾಗಿಯೂ ಪ್ರಕರಣಗಳು ಹೆಚ್ಚುತ್ತಿದ್ದು, ಇದು ಮುಂದುವರಿಯಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಕೋವಿಡ್‌ ಪ್ರಕರಣಗಳ ಏರಿಕೆ ಗಮನಿಸಿದರೆ ಅತಿ ಹೆಚ್ಚು ಜನಸಂಖ್ಯೆಯಿರುವ ವಿಶೇಷವಾಗಿ ಏಷ್ಯಾ ದೇಶಗಳಲ್ಲಿ ಸಾಂಕ್ರಾಮಿಕದ ಹೋರಾಟ ದೀರ್ಘಕಾಲಿಕವಾಗಿರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಸ್ಪಷ್ಟಪಡಿಸಿದೆ.
ಡಬ್ಲ್ಯುಎಚ್‌ಒ ಕೊರೋನಾ ವೈರಸ್‌ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಆರು ತಿಂಗಳ ಹಿಂದೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ್ದು, ಅಂದಿನಿಂದ ಇಂದಿನವರೆಗೆ ವಿಶ್ವದಲ್ಲಿ 6.80 ಲಕ್ಷ ಜನರು ಮೃತಪಟ್ಟಿದ್ದಾರೆ. 17.5 ಮಿಲಿಯನ್‌ ಜನರಿಗೆ ಸೋಂಕು ತಗುಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!