Saturday, April 17, 2021

ಬ್ರಿಟನ್ ನಲ್ಲಿ 24 ಗಂಟೆಯಲ್ಲಿ ಕೊರೋನಾಕ್ಕೆ 627 ಮಂದಿ ಬಲಿ

ಲಂಡನ್:  ಮಾರಕ ಕೊರೋನಾ ಬ್ರಿಟನ್ ನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 627 ಮಂದಿಯ ಬಲಿ ಪಡೆದುಕೊಂಡಿದೆ.  ಬ್ರಿಟನ್ ನಲ್ಲಿ ಇದುವರೆಗೆ ಕೊರೋನಾಕ್ಕೆ 32, 692 ಮಂದಿ ಬಲಿಯಾಗಿದ್ದಾರೆ. ಲಂಡನ್ ನಗರದಲ್ಲಿ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ದೇಶದಲ್ಲಿ ಜಾರಿಗೊಳಿಸಲಾಗಿರುವ ಲಾಕ್ ಡೌನ್ ನ್ನು ಹಂತ ಹಂತವಾಗಿ ಹಿಂತೆಗೆಯಲು ಬ್ರಿಟನ್ ಈಗಾಗಲೇ ನಿರ್ಧರಿಸಿದೆ. ಆದರೆ ಕೊರೋನಾ ವಿರುದ್ದದ ಯುದ್ದದಲ್ಲಿ ಬ್ರಿಟನ್ ಇದುವರೆಗೂ ಯಶಸ್ವಿಯಾಗಿಲ್ಲ. ಈ ಮಧ್ಯೆ  ಕೇರಳ ಮೂಲದ ವೈದ್ಯರೊಬ್ಬರು ಲಂಡನ್ ನಲ್ಲಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ಮೃತಪಟ್ಟವರನ್ನು ಕೇರಳದ ಪತ್ತನಂತಿಟ್ಟ ಜಿಲ್ಲೆಯ ರಾಣಿ ಪ್ರದೇಶದ ಪೂರ್ಣಿಮಾ ನಾಯರ್ ಎಂದು ಗುರುತಿಸಲಾಗಿದೆ.  ಪೂರ್ಣಿಮಾ ಲಂಡನ್ ನ  ಬಿಷಪ್ ಒಕ್ಲಂಡ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರಿಗೆ 56 ವರ್ಷ  ಪ್ರಾಯವಾಗಿತ್ತು. ಬ್ರಿಟನ್ ನಲ್ಲಿ ಇದುವರೆಗೆ 50ಕ್ಕೂ ಹೆಚ್ಚು ಭಾರತೀಯರು ಕೊರೋನಾದಿಂದ ಮೃತಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!