Tuesday, April 13, 2021

ಅಮೆರಿಕದಲ್ಲಿ 24 ಗಂಟೆಯಲ್ಲಿ ಕೊರೋನಾಕ್ಕೆ 820 ಮಂದಿ ಬಲಿ

ವಾಷಿಂಗ್ಟ್ ನ್:  ಅಮೆರಿಕದಲ್ಲಿ ಕಳೆದ 24 ಗಂಟೆಯಲ್ಲಿ 820 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.  ಅಮೆರಿಕದ ಪ್ರಮುಖ ನಗರಗಳಾದ ನ್ಯೂಯಾರ್ಕ್ , ನ್ಯೂಜೆರ್ಸಿ ಸೇರಿದಂತೆ ಹಲವು ನಗರಗಳಲ್ಲಿನ ಪರಿಸ್ಥಿತಿಯಲ್ಲಿ ಸ್ವಲ್ಪ ಸುಧಾರಣೆ ಕಂಡು ಬಂದಿದೆ. ಆದರೆ ಅಮೆರಿಕದಲ್ಲಿ ರೋಗ ಇದುವರೆಗೂ ನಿಯಂತ್ರಣಕ್ಕೆ ಬಂದಿಲ್ಲ.. ಈ ಮಧ್ಯೆ ಬ್ರಿಟನ್ ನಲ್ಲಿ ಕೂಡ ಪರಿಸ್ಥಿತಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ.  ಭಾನುವಾರ ಕೊರೋನಾ ಬ್ರಿಟನ್ ನಲ್ಲಿ  170 ಮಂದಿಯನ್ನು ಬಲಿಪಡೆದುಕೊಂಡಿದೆ. ಶನಿವಾರ ಬ್ರಿಟನ್ ನಲ್ಲಿ ಕೊರೋನಾ 468 ಮಂದಿಯ ಪ್ರಾಣ ಅಪಹರಿಸಿತ್ತು. ಇತ್ತೀಚಿನ ದಿನಗಳಲ್ಲಿ ಬ್ರಿಟನ್ ನಲ್ಲಿ ಕೊರೋನಾಕ್ಕೆ ಬಲಿಯಾಗುತ್ತಿರುವವರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಏಪ್ರಿಲ್ 21 ರಂದು ಬ್ರಿಟನ್ ನಲ್ಲಿ 1172 ಮಂದಿ ಮೃತಪಟ್ಟಿದ್ದರು. ಇದು ಅತ್ಯಧಿಕ ಮಂದಿ ಕೊರೋನಾಕ್ಕೆ  ಬಲಿಯಾದ ದಿನವಾಗಿದೆ. ಇದೇ ವೇಳೆ ಬ್ರಿಟನ್‌ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಕೂಡ ಮಾಡಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!