Tuesday, April 13, 2021

ಅಮೆರಿಕದಲ್ಲಿ 80, 000 ಗಡಿ ದಾಟಿದ ಕೊರೋನಾ ಬಲಿ

ವಾಷಿಂಗ್ಟನ್:  ಅಮೆರಿಕದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾಕ್ಕೆ  830 ಮಂದಿ ಬಲಿಯಾಗಿದ್ದಾರೆ. ಇದು ಸ್ವಲ್ಪ ನೆಮ್ಮದಿ ಮೂಡಿಸಿದೆ. ಆದರೂ ಪರಿಸ್ಥಿತಿ ಈಗಲೂ ಗಂಭೀರವಾಗಿದೆ. ಅಮೆರಿಕದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ  ಇದೀಗ 80, 352ಕ್ಕೆ ಏರಿದೆ. ಭಾನುವಾರ ಅಮೆರಿಕದಲ್ಲಿ ಕೊರೋನಾಕ್ಕೆ  776 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೇ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಕೊರೋನಾ ಎದುರಿಸಲು ರಾಜ್ಯಗಳಿಗೆ ಹಣಕಾಸು ನೆರವು ನೀಡಿದ್ದಾರೆ.  ಇನ್ನೊಂದೆಡೆ, ಬ್ರಿಟನ್ ನಲ್ಲಿ ಲಾಕ್ ಡೌನ್ ನಿಯಮ ಸಡಿಲಿಕೆಗೆ ಅಲ್ಲಿನ ವೈದ್ಯರ ಸಂಘಟನೆ ವಿರೋಧ ವ್ಯಕ್ತಪಡಿಸಿದೆ. ಈಗಲೂ ಬ್ರಿಟನ್ ನಲ್ಲಿ ಪ್ರತಿದಿನ 4000 ಕೊರೋನಾ ಪ್ರಕರಣ ವರದಿಯಾಗುತ್ತಿದೆ. ಈ ಸಂದರ್ಭದಲ್ಲಿ  ಲಾಕ್ ಡೌನ್ ಸಡಿಲಿಕೆ ಅಗತ್ಯ ಇರಲಿಲ್ಲ ಎಂದು ಬ್ರಿಟನ್ ವೈದ್ಯರ ಸಂಘಟನೆ ಹೇಳಿದೆ. ಇದೇ ವೇಳೆ ಇರಾನ್ ಕೂಡ ಲಾಕ್ ಡೌನ್ ನಿಯಮ ಸಡಿಲಗೊಳಿಸಿದ್ದು, ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!