Monday, April 12, 2021

ಬಾಂಗ್ಲಾ ರಕ್ಷಣಾ ಕಾರ್ಯದರ್ಶಿ ಮೊಹಸಿನ್ ಚೌಧರಿ ಕೊರೋನಾಕ್ಕೆ ಬಲಿ

ಢಾಕಾ: ಮಾರಕ ಕೊರೋನಾ ಬಾಂಗ್ಲಾದಲ್ಲಿ ರಕ್ಷಣಾ ಕಾರ್ಯದರ್ಶಿಯನ್ನು ಬಲಿಪಡೆದುಕೊಂಡಿದೆ. ಕೊರೋನಾ ಸೋಂಕಿಗೆ ತುತ್ತಾಗಿದ್ದ ರಕ್ಷಣಾ ಕಾರ್ಯದರ್ಶಿ  ಅಬ್ದುಲ್ಲ ಆಲಿ ಮೊಹಸಿನ್ ಚೌಧರಿ ಇಂದು ಮುಂಜಾನೆ ಕೊನೆ ಉಸಿರೆಳೆದಿದ್ದಾರೆ. ಮೇ 29ರಂದು ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಬಳಿಕ ಅವರನ್ನು ಢಾಕಾದಲ್ಲಿರುವ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಜೂನ್ 18ರಿಂದ ವೆಂಟಿಲೇಟರ್ ನಲ್ಲಿ ಅವರನ್ನು  ಇರಿಸಲಾಗಿತ್ತು. ಇಂದು ಮಂಜಾನೆ 9.30ರ ಹೊತ್ತಿಗೆ  ಚಿಕಿತ್ಸೆ ಫಲಕಾರಿಯಾಗದೆ ಮೊಹಸಿನ್ ಚೌಧರಿ ಮರಣ ಹೊಂದಿದರು. ಬಾಂಗ್ಲಾದೇಶದಲ್ಲಿ ಕೊರೋನಾಕ್ಕೆ ಬಲಿಯಾದ ಅತ್ಯಂತ ಹಿರಿಯ ಅಧಿಕಾರಿಯಾಗಿದ್ದಾರೆ ಮೊಹಸಿನ್ ಚೌಧರಿ. ಇತ್ತೀಚಿನ ದಿನಗಳಲ್ಲಿ ಬಾಂಗ್ಲಾ ದೇಶದಲ್ಲಿ ಕೊರೋನಾ  ವ್ಯಾಪಕವಾಗಿ ಹರಡುತ್ತಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!