Tuesday, April 13, 2021

ಚೀನಾದ ವುಹಾನ್ ನಲ್ಲಿ ಮತ್ತೆ ಕಾಣಿಸಿಕೊಂಡ ಕೊರೋನಾ

ಬೀಜಿಂಗ್:  ಮಾರಕ ಕೊರೋನಾದ ಜನ್ಮ ಸ್ಥಳ ಎಂಬ ಕುಖ್ಯಾತಿ ಪಡೆದಿರುವ ಚೀನಾದ ವುಹಾನ್ ನಲ್ಲಿ ಕೊರೋನಾ ಮತ್ತೆ ಕಾಣಿಸಿಕೊಂಡಿದೆ. ಚೀನಾದಲ್ಲಿ ಹೊಸದಾಗಿ 17 ಕೊರೋನಾ ಪ್ರಕರಣ ದೃಢಪಟ್ಟಿದ್ದು, ಇದರಲ್ಲಿ ಐದು ವುಹಾನ್ ನಲ್ಲಿ ವರದಿಯಾಗಿದೆ. ವುಹಾನ್ ನಲ್ಲಿ ಕೊರೋನಾ ಭೀತಿ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ 76 ದಿನಗಳ ಕಾಲ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಕೊರೋನಾ ವಿರುದ್ದ ಪರಿಣಾಮಕಾರಿ ಕ್ರಮ ತೆಗೆದುಕೊಂಡು ಅದರ ವಿರುದ್ದ ಜಯಗಳಿಸಿರುವುದಾಗಿ ಚೀನಾ ಹೇಳಿತ್ತು.  ಏಪ್ರಿಲ್ 8 ರಂದು ಈ ಲಾಕ್ ಡೌನ್ ಹಿಂತೆಗೆಯಲಾಗಿತ್ತು. ಇದೀಗ ಒಂದು ತಿಂಗಳ ಬಳಿಕ ವುಹಾನ್ ನಲ್ಲಿ ಕೊರೋನಾ ಪ್ರಕರಣ ಬೆಳಕಿಗೆ ಬಂದಿದೆ. ವುಹಾನ್ ನಲ್ಲಿ  50, 334 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದರು.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!