Wednesday, July 6, 2022

ಕೊರೋನಾ ನಿರ್ಬಂಧ; ಪ್ರತಿ ತಿಂಗಳು 10,000ಕ್ಕೂ ಹೆಚ್ಚು ಮಕ್ಕಳ ಸಾವು

Follow Us

ನ್ಯೂಯಾರ್ಕ್: ಕೊರೋನಾ ನಿರ್ಬಂಧಗಳಿಂದಾಗಿ ಪ್ರತಿ ತಿಂಗಳು ಸುಮಾರು 10,000ಕ್ಕೂ ಹೆಚ್ಚು ಮಕ್ಕಳು ಸಾಯುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ.
ಪ್ರತಿ ತಿಂಗಳು 5.50 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಕೊರೋನಾ ನಿರ್ಬಂಧ ಕಾರಣಕ್ಕಾಗಿ ಹೆಚ್ಚುವರಿಯಾಗಿ ಸುಮಾರು 10,000 ಹೆಚ್ಚು ಮಕ್ಕಳು ಮೃತಪಡುತ್ತಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಆಹಾರ ಭದ್ರತೆಗೆ ಕೋವಿಡ್ ಬಿಕ್ಕಟ್ಟು ನೀಡಿರುವ ಹೊಡೆತದ ಪರಿಣಾಮವು ಮುಂದಿನ ಹಲವಾರು ವರ್ಷಗಳಲ್ಲಿ ಗೋಚರಿಸಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪೌಷ್ಟಿಕತೆ ವಿಭಾಗದ ಮುಖ್ಯಸ್ಥ ಪ್ರಾನ್ಸೆಸ್ಕೊ ಬ್ರಾಂಕ ಹೇಳಿದ್ದಾರೆ. ಜಾಗತಿಕ ಹಸಿವನ್ನು ನೀಗಿಸಲು ಕನಿಷ್ಠ 2.4 ಬಿಲಿಯನ್ ಡಾಲರ್ (ಸುಮಾರು 17,970 ಕೋಟಿ ರೂಪಾಯಿ) ತುರ್ತು ನೆರವಿನ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಹೇಳಿದೆ.
ಹೆಚ್ಚುತ್ತಿರುವ ಅಪೌಷ್ಟಿಕತೆಯು ದೀರ್ಘಾವಧಿ ಪರಿಣಾಮಗಳನ್ನು ಬೀರುತ್ತದೆ ಹಾಗೂ ಅದು ವೈಯಕ್ತಿಕ ದುರಂತಗಳನ್ನು ತಲೆಮಾರೊಂದರ ವಿನಾಶವನ್ನಾಗಿ ಮಾಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ, ಯುನಿಸೆಫ್, ವಿಶ್ವ ಆಹಾರ ಕಾರ್ಯಕ್ರಮ ಮತ್ತು ಆಹಾರ ಮತ್ತು ಕೃಷಿ ಸಂಸ್ಥೆಗಳು ಅಭಿಪ್ರಾಯಪಟ್ಟಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ...

ಬೆಂಗಳೂರಿನಲ್ಲಿ 1,053 ಸೇರಿ ರಾಜ್ಯದಲ್ಲಿ 1,127 ಮಂದಿಗೆ ಕೊರೋನಾ ಸೋಂಕು

newsics.com ಬೆಂಗಳೂರು; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,127 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ಸಂಭವಿಸಿಲ್ಲ, ಹೀಗಾಗಿ ಸಂಖ್ಯೆ 40080 ಇದೆ. ಬೆಂಗಳೂರು...

ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ರಾಜ್ಯಸಭೆಗೆ ನಾಲ್ವರ ನಾಮನಿರ್ದೇಶನ; ಅಭಿನಂದಿಸಿದ ಪ್ರಧಾನಿ ಮೋದಿ

newsics.com ನವದೆಹಲಿ; ರಾಜ್ಯಸಭೆಗೆ ಧರ್ಮಸ್ಥಳದ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ಸಂಗೀತ ಮಾಂತ್ರಿಕ ಇಳಯರಾಜ, ಅಥ್ಲೀಟ್​ ಪಿಟಿ ಉಷಾ ಹಾಗೂ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್  ನಾಮ ನಿರ್ದೇಶನಗೊಂಡಿದ್ದಾರೆ. https://twitter.com/narendramodi/status/1544693793240322049?t=2u64d_ttEmETQgNsb5Joxg&s=19 ನಾಲ್ವರ ಫೋಟೋ ಹಂಚಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ...
- Advertisement -
error: Content is protected !!