ಬೀಜಿಂಗ್: ಮಾರಕ ಕೊರೋನಾ ವೈರಸ್ ದಾಳಿಗೆ ಚೀನಾದಲ್ಲಿ ಸತ್ತವರ ಸಂಖ್ಯೆ 803ಕ್ಕೆ ಏರಿದೆ. ನಿನ್ನೆ ಒಂದೇ ದಿನ 50ಕ್ಕೂ ಹೆಚ್ಚು ಮಂದಿ ಈ ಮಾರಕ ರೋಗಕ್ಕೆ ಬಲಿಯಾಗಿದ್ದಾರೆ. ಚೀನಾ, ರೋಗ ನಿಯಂತ್ರಿಸಲು ಎಲ್ಲ ಕ್ರಮ ಕೈಗೊಳ್ಳುತ್ತಿದ್ದರೂ ಅದು ಪರಿಣಾಮಕಾರಿಯಾಗಿಲ್ಲ. ಈ ಮಧ್ಯೆ ರೋಗ ಕುರಿತಂತೆ ಚೀನಾ ಅಂತಾರಾಷ್ಟ್ರೀಯ ಸಮುದಾಯದಿಂದ ಮಾಹಿತಿ ಮುಚ್ಚಿಡುತ್ತಿದೆ ಎಂಬ ಆರೋಪ ಕೂಡ ಕೇಳಿ ಬಂದಿದೆ.