ಬೀಜಿಂಗ್: ಮಾರಕ ಕೊರೋನಾ ವೈರಸ್ ಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ 1110ಕ್ಕೆ ಏರಿದೆ. ನಿನ್ನೆ ಒಂದೇ ದಿನ 97 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಇದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ರೋಗಕ್ಕೆ ಬಲಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವ ಆರೋಗ್ಯ ಸಂಸ್ಥೆ ಚೀನಾದಲ್ಲಿ 42, 708 ಮಂದಿಗೆ ರೋಗದ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಹೇಳಿದೆ.