ಟೋಕಿಯೊ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸಮುದ್ರದಲ್ಲಿಯೇ ಲಂಗರು ಹಾಕಿರುವ ಜಪಾನ್‌ನ ವಿಲಾಸಿ ನೌಕೆಯಲ್ಲಿರುವ ಇಬ್ಬರು ಭಾರತೀಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ಈ ಮಾಹಿತಿಯನ್ನು ಟೋಕಿಯೋದಲ್ಲಿರುವ ಭಾರತದ ರಾಯಭಾರ ಕಚೇರಿ ದೃಢಪಡಿಸಿದೆ. ಅವರನ್ನು ಇನ್ನೂ 14 ದಿನ ಪ್ರತ್ಯೇಕವಾಗಿ ಇರಿಸಲಾಗುತ್ತದೆ.
ಜಪಾನ್‌ನ ವಿಲಾಸಿ ನೌಕೆ ಡೈಮಂಡ್ ಪ್ರಿನ್ಸೆಸ್‌ನಲ್ಲಿ ಇನ್ನೂ 39 ಮಂದಿಯಲ್ಲಿ ಕೋವಿಡ್-19 ವೈರಸ್ ಸೋಂಕು ಪತ್ತೆಯಾಗಿದೆ. ಹೀಗಾಗಿ, ಸೋಂಕು ಪೀಡಿತರ ಸಂಖ್ಯೆ 174ಕ್ಕೆ ಏರಿಕೆಯಾಗಿದೆ.
ಜಪಾನ್ ಹಡಗಿನಲ್ಲಿ ಇಬ್ಬರು ಭಾರತೀಯರಿಗೆ ಕೊರೊನಾ ಸೋಂಕು ದೃಢ
Follow Us