Monday, April 12, 2021

ಕೊರೋನಾಗೆ ಮೂವರು ಪಾಕ್ ಪತ್ರಕರ್ತರು ಬಲಿ

ಇಸ್ಲಾಮಾಬಾದ್: ಕೊರೋನಾ ಸೋಂಕಿನಿಂದ ಪಾಕಿಸ್ತಾನದ ಮೂವರು ಪತ್ರಕರ್ತರು ಸಾವನ್ನಪ್ಪಿದ್ದು, 156 ಮಾಧ್ಯಮ ಸಿಬ್ಬಂದಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪಾಕಿಸ್ತಾನ ಫೆಡರಲ್ ಯೂನಿಯನ್ ಆಫ್ ಜರ್ನಲಿಸ್ಟ್(ಪಿಎಫ್‌ಯುಜೆ) ಈ ಮಾಹಿತಿ ನೀಡಿದೆ. ವಿಡಿಯೋ ಮತ್ತು ಫೋಟೋ ಪತ್ರಕರ್ತರು ಕೊರೋನಾದ ಪೀಡಿಗೆಗೆ ಒಳಗಾಗಿದ್ದಾರೆ ಎಂದು ತಿಳಿಸಿದೆ.
ಮೃತರೊಬ್ಬರು ಮುಲ್ತಾನ್ ಮತ್ತು ಇಬ್ಬರು ಸುಕ್ಕೂರ್‌ಗೆ ಸೇರಿದವರಾಗಿದ್ದಾರೆ. ಲಾಹೋರ್‌ನಲ್ಲಿಯೇ ಗರಿಷ್ಠ 84 ಪತ್ರಕರ್ತರು ಸೋಂಕಿಗೆ ಒಳಗಾಗಿದ್ದಾರೆ. ರಾವಲ್ಪಿಂಡಿ ಮತ್ತು ಇಸ್ಲಾಮಾಬಾದ್‌ನಿಂದ ತಲಾ 24, ಕ್ವೆಟ್ಟಾದಿಂದ 17, ಪೇಶಾವರದಿಂದ 12, ಕರಾಚಿಯಿಂದ ಒಂಬತ್ತು, ಸುಕ್ಕೂರ್ ಆರು, ಮುಲ್ತಾನ್ ಐದು, ಗುಜ್ರಾನ್‌ವಾಲಾ ಮತ್ತು ಹೈದರಾಬಾದ್‌ನಿಂದ ತಲಾ ಎರಡು ಪ್ರಕರಣ ದಾಖಲಾಗಿವೆ. ಫೈಸಲಾಬಾದ್, ಬಹವಾಲ್ಪುರ್ ಮತ್ತು ರಹೀಂ ಯಾರ್ ಖಾನ್ ಪತ್ರಕರ್ತರಿಗೆ ಕೊರೋನಾ ಸೋಂಕಿನ ಬಗ್ಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮಾಧ್ಯಮ ಕಾರ್ಯಕರ್ತರೂ ಸೋಂಕಿಗೆ ಒಳಗಾಗಿದ್ದು, ಈಗ ಆರೋಗ್ಯವಾಗಿದ್ದಾರೆ ಎಂದು ಡಾನ್ ನ್ಯೂಸ್ ವರದಿ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!