Tuesday, April 13, 2021

ಭ್ರಷ್ಟಾಚಾರ ಆರೋಪ: ನೆತನ್ಯಾಹು ವಿಚಾರಣೆ ಆರಂಭ

ಟೆಲ್ ಅವೀವ್: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಚಾರಣೆ  ಟೆಲ್ ಅವೀವ್ ನ್ಯಾಯಾಲಯದಲ್ಲಿ ಆರಂಭವಾಗಿದೆ. ಐದನೇ ಬಾರಿ ಇಸ್ರೇಲ್ ಪ್ರಧಾನಿಯಾಗಿ ಆಯ್ಕೆಯಾಗಿರುವ ನೆತನ್ಯಾಹು ವಿರುದ್ಧ ಗಂಭೀರ ಆರೋಪ ಹೊರಿಸಲಾಗಿದೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ನೆತನ್ಯಾಹು ಅವರು ಉದ್ಯಮಿಗಳಾಗಿರುವ ತಮ್ಮ ಸ್ನೇಹಿತರಿಗೆ ಲಾಭ ಮಾಡಿಕೊಡಲು ಅಧಿಕಾರವನ್ನು ದುರುಪಯೋಗಪಡಿಸಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ. ಇಸ್ರೇಲ್ ನ ಪ್ರಮುಖ ದಿನ ಪತ್ರಿಕೆಯೊಂದರಲ್ಲಿ ಸರ್ಕಾರದ ಸಾಧನೆಗಳನ್ನು ಹೊಗಳಿ ಬರೆಯಲು ಹಣದ ಆಮಿಷ ಕೂಡ ಒಡ್ಡಿದ್ದರು ಎಂಬ ಆರೋಪ ಹೊರಿಸಲಾಗಿದೆ. ಇಸ್ರೇಲ್ ನಲ್ಲಿ ಇದೇ ಮೊದಲ ಬಾರಿಗೆ  ಪ್ರಧಾನಿಯೊಬ್ಬರು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇದೇ ವೇಳೆ ತಮ್ಮ ಮೇಲೆ ಹೊರಿಸಲಾಗಿರುವ ಎಲ್ಲ ಆರೋಪಗಳನ್ನು ನೆತನ್ಯಾಹು ನಿರಾಕರಿಸಿದ್ದಾರೆ. ಎಲ್ಲವನ್ನು ಬಯಲು ಮಾಡುತ್ತೇನೆ ಎಂದು ಅವರು ಗುಡುಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!