Monday, November 29, 2021

ಕೊರೋನಾ ಸಮಯದಲ್ಲೂ ಪಾಕ್ ತಾರತಮ್ಯ!

Follow Us

ಹಿಂದು, ಕ್ರಿಶ್ಚಿಯನ್ನರಿಗೆ ಪಡಿತರ ನೀಡದ ಅಧಿಕಾರಿಗಳು

ಕರಾಚಿ: ಕೊರೋನಾದಂತಹ ಕಠಿಣ ಸಮಯದಲ್ಲೂ ಪಾಕಿಸ್ತಾನ ಅಲ್ಪಸಂಖ್ಯಾತ ಹಿಂದೂ, ಕ್ರಿಶ್ಚಿಯನ್ನರಿಗೆ ಆಹಾರ ನೀಡದೆ ತಾರತಮ್ಯ ತೋರಿರುವುದು ಬೆಳಕಿಗೆ ಬಂದಿದೆ.
ಪಾಕಿಸ್ತಾನದಲ್ಲಿರುವ ಹಿಂದೂಗಳು, ಮತ್ತು ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಅಧಿಕಾರಿಗಳು ಆಹಾರ ಸಾಮಗ್ರಿಗಳನ್ನು ನೀಡದೆ ತಾರತಮ್ಯ ಮಾಡುತ್ತಿದ್ದಾರೆ ಎಂದು ಖಾಸಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಕೊರೋನಾ ಹಿನ್ನೆಲೆಯಲ್ಲಿ ಅಂಗಡಿಗಳು ಮುಚ್ಚಿರುವುದರಿಂದ ಜನರು ಕರಾಚಿಯ ರೆಹ್ರಿ ಘೋತ್‌ನಲ್ಲಿ ಆಹಾರ ಸರಬರಾಜು ಮತ್ತು ದೈನಂದಿನ ಅಗತ್ಯ ವಸ್ತುಗಳನ್ನು ಪಡೆಯಲು ಸೇರುತ್ತಾರೆ. ಆದರೆ ಅಧಿಕಾರಿಗಳು ಹಿಂದೂ ಸಮುದಾಯಕ್ಕೆ ಸೇರಿದವರು ಹಿಂದಕ್ಕೆ ಹೋಗಬೇಕೆಂದು ಹೇಳಿದ್ದಾರೆ. ಹಿಂದೂಗಳು ಸರದಿಯಲ್ಲಿದ್ದರೂ ಅವರನ್ನು ಹಿಂದಕ್ಕೆ ಕಳುಹಿಸಲಾಗಿದೆ. ಮುಸ್ಲಿಮರಿಗೆ ಹಂಚಿ ಉಳಿದರೆ ಕೊಡುವುದಾಗಿ ಅಧಿಕಾರಿಗಳು ಹೇಳಿದ್ದಾರೆ ಎಂದು ತಿಳಿದುಬಂದಿದೆ. ಪಡಿತರ ವಿತರಣೆ ಏನಿದ್ದರೂ ಅದು ಮುಸ್ಲಿಮರಿಗೆ ಮಾತ್ರ ಎಂದೂ ಪಾಕ್ ಅಧಿಕಾರಿಗಳು ಹೇಳಿದ್ದರೆನ್ನಲಾಗಿದೆ.
ನಮ್ಮ ನೆರೆಹೊರೆಯ ಜನರು ಅಗತ್ಯ ವಸ್ತುಗಳನ್ನು ಪಡೆಯುತ್ತಿದ್ದಾರೆ. ಆದರೆ ನಾವು ಮಾತ್ರ ಬವಣೆಪಡುತ್ತಿದ್ದೇವೆ. ನಮಗೆ ತಿನ್ನಲು ಏನೂ ಇಲ್ಲ. ನಮ್ಮ ಬಳಿ ಹಣವಿಲ್ಲ. ನಾವು ಪಡಿತರ ವಿತರಣಾ ಕೇಂದ್ರಗಳಿಗೆ ಹೋದರೂ ಅಧಿಕಾರಿಗಳು ಅಗತ್ಯ ವಸ್ತುಗಳನ್ನು ಪ್ರತ್ಯೇಕ ಟ್ರಕ್‌ಗಳಲ್ಲಿ ಕಳುಹಿಸುತ್ತೇವೆ ಎಂದು ಭರವಸೆ ನೀಡುತ್ತಾರೆ. ಆದರೆ ಕಳುಹಿಸುವುದೇ ಇಲ್ಲ ಎಂದು ಕರಾಚಿಯ ಹಿಂದೂ ಸಮುದಾಯದ ಮತ್ತೊಬ್ಬ ವ್ಯಕ್ತಿ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,900 ದಾಟಿದೆ. ಪಾಕಿಸ್ತಾನದಲ್ಲಿ ಹಿಂದೂಗಳು ದೇಶದ ಜನಸಂಖ್ಯೆಯ ಶೇಕಡಾ 4 ರಷ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!