newsics.com
ಇಂಡೋನೇಷ್ಯಾ: ಇಲ್ಲಿನ ಬಾಲಿಯಲ್ಲಿ ಭೂಕಂಪ ಸಂಭವಿಸಿದ್ದು, ಮೂವರು ಮೃತಟ್ಟಿದ್ದಾರೆ. 7 ಮಂದಿ ಗಾಯಗೊಂಡಿದ್ದು, ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆ ದಾಖಲಾಗಿದೆ.
ಇಂದು ಮುಂಜಾನೆ ಸುಮಾರು 3:18ಕ್ಕೆ ಭೂಮಿ ಕಂಪಿಸಿದೆ. 8 ಕಿ.ಮೀ ದೂರದ ಕರಂಗಾಸೆಮ್ ಜಿಲ್ಲೆಯ ವಾಯುವ್ಯ ಭಾಗದ ಪ್ರದೇಶ ಕಂಪನದ ಕೇಂದ್ರ ಬಿಂದು ದಾಖಲಾಗಿದೆ.
ವಿಪತ್ತು ನಿರ್ವಹಣ ಪಡೆ ಹಾಗೂ ರಕ್ಷಣ ಪಡೆ ಸ್ಥಳಕ್ಕೆ ಧಾವಿಸಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವಾರು ಕಟ್ಟಡಗಳು ನೆಲಕ್ಕುರುಳಿವೆ ಎಂದು ತಿಳಿದುಬಂದಿದೆ.