newsics.com
ಪಾಕಿಸ್ತಾನ: ದಕ್ಷಿಣ ಪಾಕಿಸ್ತಾನದಲ್ಲಿ ತೀವ್ರ ಭೂಕಂಪ ಸಂಭವಿಸಿದ್ದು ಮನೆಯ ಛಾವಣಿ, ಗೋಡೆ ಕುಸಿದು ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ.
ಇಂದು ನಸುಕಿನ ಜಾವ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 6.0ರಷ್ಟು ತೀವ್ರತೆ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ರಕ್ಷಣಾ ತಂಡಗಳು ಕಾರ್ಯ ಆರಂಭಿಸಿವೆ ಎಂದು ಪ್ರಾಂತೀಯ ಸರ್ಕಾರಿ ಅಧಿಕಾರಿ ಸುಹೇಲ್ ಅನ್ವರ್ ಹಶ್ಮಿ ಎಎಫ್ಪಿಗೆ ತಿಳಿಸಿದ್ದಾರೆ.
ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದ್ದು , ಬಲೂಚಿಸ್ತಾನ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿಯೂ ಭೂಕಂಪದ ಅನುಭವವಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ತಿಳಿಸಿದೆ.
ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ: ಕನಿಷ್ಠ 20 ಮಂದಿ ಸಾವು
Follow Us