ಕಾಠ್ಮಂಡು: ನೇಪಾಳಕ್ಕೆ ಪ್ರವಾಸಕ್ಕೆ ತೆರಳಿದ್ದ ಕೇರಳದ ಎಂಟು ಮಂದಿ ಕಾಠ್ಮಂಡು ಸಮೀಪದ ಧಮನ್ ಎಂಬಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಘಟನೆಗೆ ಏನು ಕಾರಣ ಎಂಬುದು ಇದುವರೆಗೆ ತಿಳಿದು ಬಂದಿಲ್ಲ. ನೇಪಾಳ ರಾಜಧಾನಿ ಕಾಠ್ಮಂಡುವಿನಿಂದ 77 ಕಿಲೋ ಮೀಟರ್ ದೂರದಲ್ಲಿರುವ ಧಮನ್ ಸಮೀಪದ ರೆಸಾರ್ಟ್ ನಲ್ಲಿ ಈ ದುರಂತ ಸಂಭವಿಸಿದೆ. ಉಸಿರುಗಟ್ಟಿದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಮೃತರೆಲ್ಲರೂ ಕೇರಳದ ತಿರುವನಂತಪುರ ನಿವಾಸಿಗಳಾಗಿದ್ದಾರೆ ಎಂದು ವರದಿಯಾಗಿದೆ.