Tuesday, April 13, 2021

ಉಗ್ರರಿಗೆ ಆರ್ಥಿಕ ನೆರವು; ಮತ್ತೆ ಪಾಕ್’ಗೆ ಮುಖಭಂಗ

ಪ್ಯಾರಿಸ್: ಜಾಗತಿಕ ಕಣ್ಗಾವಲು ಸಂಸ್ಥೆ (ಎಫ್’ಎಟಿಎಫ್) ಪಾಕಿಸ್ತಾನವನ್ನು ಮತ್ತೆ ಗ್ರೇ ಪಟ್ಟಿಯಲ್ಲೇ ಮುಂದುವರೆಸಲು ತೀರ್ಮಾನಿಸಿದೆ.
ಹಲವು ಉಪಕ್ರಮಗಳ ಬಳಿಕವೂ ಪಾಕಿಸ್ತಾನ ಭಯೋತ್ಪಾದಕರಿಗೆ ಪರೋಕ್ಷವಾಗಿ ಆರ್ಥಿಕ ನೆರವು ಸಿಗುವಂತೆ ಮಾಡಿರುವ ಹಿನ್ನೆಲೆಯಲ್ಲಿ ಎಫ್’ಎಟಿಎಫ್ ಈ ನಿರ್ಧಾರ ಕೈಗೊಂಡಿದೆ. ಎಫ್’ಎಟಿಎಫ್ ನ ಈ ಕ್ರಮದಿಂದಾಗಿ ಮತ್ತೆ ಪಾಕಿಸ್ತಾನಕ್ಕೆ ಮುಖಭಂಗವಾಗಿದೆಯಲ್ಲದೆ, ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ತೀವ್ರ ಹಿನ್ನಡೆಯಾಗಿ ಪರಿಣಮಿಸಿದೆ. ಜೂ.25 ರಂದು ನಡೆದ ಸಭೆಯಲ್ಲಿ ಈ ಎಫ್ಎಟಿಎಫ್ ಈ ನಿರ್ಧಾರ ಪ್ರಕಟಿಸಿದ್ದು, ಅಕ್ಟೋಬರ್ ನಲ್ಲಿ ನಡೆಯಲಿರುವ ಮುಂದಿನ ಸಭೆಯವರೆಗೂ ಈ ಆದೇಶ ಅನ್ವಯವಾಗಲಿದೆ.
ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಜೈಶ್-ಎ-ಮೊಹಮ್ಮದ್ (ಜೆಇಎಂ) ಸೇರಿದಂತೆ ಹಲವು ಉಗ್ರ ಸಂಘಟನೆಗಳಿಗೆ ಆರ್ಥಿಕ ನೆರವು ಸಿಗುವುದನ್ನು ಪಾಕಿಸ್ತಾನ ಸಮರ್ಥವಾಗಿ ತಡೆಗಟ್ಟಿಲ್ಲದ ಕಾರಣ ಪಾಕಿಸ್ತಾನವನ್ನು ಗ್ರೇ ಪಟ್ಟಿಯಲ್ಲೇ ಉಳಿಸಲಾಗುತ್ತಿದೆ ಎಂದು ಎಫ್ಟಿಎಎಫ್ ತಿಳಿಸಿದೆ. ಪಾಕಿಸ್ತಾನ ಭಯೋತ್ಪಾದಕರ ಪಾಲಿಗೆ ಸ್ವರ್ಗವಾಗಿದೆ ಎಂಬ ಅಮೆರಿಕ ಹೇಳಿಕೆಯ ಬೆನ್ನಲ್ಲೇ ಎಫ್ಎಟಿಎಫ್ ಈ ಆದೇಶ ಹೊರಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!