Saturday, November 27, 2021

ಕೆನಡಾ ನಾಗರಿಕನಿಂದ ಗುಂಡಿನ ದಾಳಿ; 16 ಮಂದಿ ಹತ್ಯೆ

Follow Us

ಟೊರೊಂಟೊ: ಪೊಲೀಸ್ ಅಧಿಕಾರಿ ಸೋಗಿನಲ್ಲಿದ್ದ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿ 16 ಮಂದಿಯನ್ನು ಹತ್ಯೆಗೈದಿದ್ದಾನೆ.
ಈ ಘಟನೆ ಕೆನಡಾದ ನೋವಾ ಸ್ಕಾಟಿಯಾ ಪ್ರಾಂತ್ಯದಲ್ಲಿ ನಡೆದಿದೆ. ಈ ನರಮೇಧ ನಡೆಸಿದ ಗನ್‍ಮ್ಯಾನ್‍ನನ್ನು 12 ತಾಸುಗಳ ಕಾರ್ಯಾಚರಣೆ ಬಳಿಕ ಪೊಲೀಸರು ಗುಂಡಿಟ್ಟು ಕೊಂದಿದ್ದಾರೆ.
30 ವರ್ಷಗಳಲ್ಲಿ ಕೆನಡಾದಲ್ಲಿ ನಡೆದ ಅತ್ಯಂತ ಘೋರ ಮಾರಣಹೋಮ ಇದಾಗಿದೆ. ಕೆನಡಾದ ಹಾಲಿಫ್ಯಾಕ್ಸ್ ನಗರದಿಂದ ಉತ್ತರಕ್ಕ 100 ಕಿಮೀ ದೂರದಲ್ಲಿರುವ ಪೊರ್ಟಾಪಿಕ್ ಪಟ್ಟಣದ ಅಕ್ಕಪಕ್ಕದ ಮನೆಗಳ ಮೇಲೆ ಅದೇ ಪ್ರದೇಶದ ತಾತ್ಕಾಲಿಕ ನಿವಾಸಿ ಗೇಬ್ರಿಯಲ್ ವೋರ್ಟ್‍ಮನ್ (51) ಗನ್‍ನಿಂದ ಮನಬಂದಂತೆ ಗುಂಡು ಹಾರಿಸಿದ್ದಾನೆ.
ಈ ಹತ್ಯಾಕಾಂಡ ಇತಿಹಾಸದಲ್ಲೇ ಅತ್ಯಂತ ಪ್ರಜ್ಞಾರಹಿತ ಹಿಂಸಾಚಾರ ಕೃತ್ಯಗಳಲ್ಲಿ ಒಂದಾಗಿದೆ ಎಂದು ನೊವಾ ಸ್ಕಾಟಿಯಾ ಪ್ರಾಂತ್ಯದ ಪ್ರಧಾನಮಂತ್ರಿ ಸ್ಟೀಫನ್ ಮ್ಯಾಕ್‍ನೀಲ್ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!