newsics.com
ಅಲ್ಜೀರ್ಸ್ : ಅಲ್ಜೀರಿಯಾದಲ್ಲಿ ಕಾಡ್ಗಿಚ್ಚಿನ ಹಾವಳಿ ತೀವ್ರವಾಗಿದೆ. ಬೆಂಕಿಯ ಕೆನ್ನಾಲಗೆಗಳು ವ್ಯಾಪಿಸುತ್ತಿವೆ. ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತವಾಗಿದ್ದ 25 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ.
ರಾಜಧಾನಿ ಅಲ್ಜೀರ್ಸ್ ನಿಂದ 100 ಕಿಲೋ ಮೀಟರ್ ದೂರದಲ್ಲಿರುವ ಪರ್ವತ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. 17 ನಾಗರಿಕರು ಕೂಡ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಇದುವರೆಗೆ ಕಾಡ್ಗಿಚ್ಚಿನಿಂದ 42 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ