Saturday, April 17, 2021

ಪಾಕ್ ಮಾಜಿ ಪ್ರಧಾನಿ ಅಬ್ಬಾಸಿಗೆ ಕೊರೋನಾ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಶಾಹಿದ್ ಕಖ್ಖಾನ್ ಅಬ್ಬಾಸಿ ಅವರಿಗೆ ಕೊರೋನಾ ಸೋಂಕು ತಗುಲಿದೆ.
ಅಬ್ಬಾಸಿ ಅವರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ. ಅವರನ್ನು ಸ್ವಗೃಹದಲ್ಲಿ ಕ್ವಾರಂಟೈನ್‌ನಲ್ಲಿಡಲಾಗಿದೆ ಎಂದು ಪಿಎಂಎಲ್-ಎನ್ ಪಕ್ಷದ ವಕ್ತಾರ ಮರಿಯಾಮ್ ಔರಂಗಜೇಬ್ ಹೇಳಿದ್ದಾರೆಂದು ಡಾನ್ ಪತ್ರಿಕೆಯ ವರದಿ ತಿಳಿಸಿದೆ.
ಕೊರೋನಾ ಸೋಂಕು ದೃಢಪಟ್ಟಿರುವ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್‌ ಅವರು ಸ್ವಯಂ ಕ್ವಾರಂಟೈನ್‌ಗೊಳಗಾಗಿದ್ದಾರೆಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1,03,671ಕ್ಕೇರಿದೆ. ಒಟ್ಟು 2067 ಮಂದಿ ಮೃತಪಟ್ಟಿದ್ದು, 34,355 ಮಂದಿ ಚೇತರಿಸಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!