Saturday, April 17, 2021

ಅಂಫಾನ್ ಚಂಡಮಾರುತ ಅಬ್ಬರಕ್ಕೆ ಬಾಂಗ್ಲಾದಲ್ಲಿ ಅಪಾರ ಹಾನಿ, ನಾಲ್ಕು ಬಲಿ

ಢಾಕಾ: ಬುಧವಾರ ಸಂಜೆ ಅಪ್ಪಳಿಸಿದ ಅಂಫಾನ್ ಚಂಡಮಾರುತದ ಪರಿಣಾಮ ಬಾಂಗ್ಲಾದಲ್ಲಿ ಅಪಾರ ಹಾನಿ  ಸಂಭವಿಸಿದೆ. ನಾಲ್ಕು ಮಂದಿ ಮೃತಪಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗಾಳಿಯ ವೇಗಕ್ಕೆ ಮರಗಳು  ಬುಡ ಸಮೇತ ಮಗುಚಿ ಬಿದ್ದಿದ್ದು ರಸ್ತೆ ಸಂಪರ್ಕಕ್ಕೆ ಅಡ್ಡಿಯಾಗಿದೆ. ಬಾಂಗ್ಲಾ ದೇಶದ ಕರಾವಳಿ ತೀರದಲ್ಲಿ ಭಾರೀ ಮಳೆಯಾಗುತ್ತಿದೆ. ನಿರಾಶ್ರಿತ ಶಿಬಿರದಲ್ಲಿದ್ದ ರೊಹಿಂಗ್ಯಾ ಮುಸ್ಲಿಮರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಚಂಡಮಾರುತ ರಕ್ಷಣಾ ಕೇಂದ್ರಗಳಿಗೆ ಸ್ಛಳಾಂತರಿಸಲಾಗಿದೆ. ಇದೇ ವೇಳೆ ಪಶ್ಚಿಮ ಬಂಗಾಳದ  ಉತ್ತರ ಮತ್ತು ದಕ್ಷಿಣ ಪರಗಣ ಜಿಲ್ಲೆಯಲ್ಲಿ  ವ್ಯಾಪಕ ಹಾನಿ ಸಂಭವಿಸಿದೆ. 5500ಕ್ಕೂ ಹಚ್ಚು ಮನೆಗಳು ಹಾನಿಗೊಳಗಾಗಿವೆ. ಚಂಡಮಾರುತದಿಂದ 12 ಮಂದಿ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಹೇಳಿದೆ. ಇಂದು ಈ  ಹಾನಿಯ ಕುರಿತು ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆಗಳಿವೆ

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!