Thursday, August 18, 2022

ಮಾಲಿಯಲ್ಲಿ 50 ಉಗ್ರರ ಹತ್ಯೆಗೈದ ಫ್ರೆಂಚ್ ಪಡೆ

Follow Us

newsics.com
ಬಮಾಕೊ: ಮಾಲಿಯಲ್ಲಿ ಫ್ರಾನ್ಸ್ ಸೇನೆ ನಡೆಸಿದ ವಾಯುದಾಳಿಯಲ್ಲಿ ಅಲ್ ಖೈದಾ ಸಂಪರ್ಕದಲ್ಲಿದ್ದ 50 ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಅಕ್ಟೋಬರ್ 30 ರಂದು ಬಾರ್ಖೇನ್ ಪಡೆ ಈ ಕಾರ್ಯಾಚರಣೆ ನಡೆಸಿದ್ದು, 50ಕ್ಕೂ ಹೆಚ್ಚು ಜಿಹಾದಿಗಳನ್ನು ಹತ್ಯೆ ಮಾಡಿ, ಅವರ ಶಸಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಫ್ರೆಂಚ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಟ್ವೀಟ್ ಮಾಡಿದ್ದು, ವಿದೇಶಿ ನಿಯೋಜಿತ ಫ್ರೆಂಚ್ ಪಡೆಗಳ ಸೇವೆಗಾಗಿ ಧನ್ಯವಾದ ಸಲ್ಲಿಸಿದ್ದಾರೆ. ಪಶ್ಚಿಮ ಆಫ್ರಿಕಾದ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಚುನಾವಣೆಗಳನ್ನು ಆಯೋಜಿಸಲು ಮಾಲಿಯನ್ ಮಧ್ಯಂತರ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಪ್ರತ್ಯೇಕ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ಇದು ರಷ್ಯಾದಲ್ಲಿ ನಿಷೇಧಿಸಲ್ಪಟ್ಟಿರುವ ಅಲ್ ಖೈದಾದೊಂದಿಗೆ ಸಂಯೋಜಿತವಾದ ಗುಂಪೊಂದಕ್ಕೆ ಮಹತ್ವದ ಹೊಡೆತದ ಕಾರ್ಯಾಚರಣೆಯಾಗಿದೆ. ಕಾರ್ಯಾಚರಣೆಯ ಯಶಸ್ಸಿನ ಬಗ್ಗೆ ಮಾಲಿಯನ್ ಗಣ್ಯರಿಗೆ ತಿಳಿಸಿರುವುದಾಗಿ ಅವರು ತಿಳಿಸಿದ್ದಾರೆ. ಈ ದಾಳಿಯಲ್ಲಿ ಉಗ್ರಗಾಮಿಗಳ ಕಾರುಗಳು ಮತ್ತು 30ಕ್ಕೂ ಹೆಚ್ಚು ಮೋಟಾರ್ ಸೈಕಲ್‍ಗಳು ಧ್ವಂಸಗೊಂಡಿವೆ.

ಮುಚ್ಚಿತು ವಿಶ್ವದ ಅತಿ ದೊಡ್ಡ ನಸುಗೆಂಪು ಗಣಿ!

ಮುಂಬೈ ವಿರುದ್ಧ ಗೆದ್ದ ಹೈದರಾಬಾದ್

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!