Sunday, December 5, 2021

ಕೊರೋನಾದಿಂದ ಜಾಗತಿಕ ಆರ್ಥಿಕತೆ ಕುಸಿತ- ಐಎಂಎಫ್

Follow Us

ವಾಷಿಂಗ್ಟನ್: ಕೊರೋನಾ ವೈರಾಣು ಜಗತ್ತಿನ ಆರ್ಥಿಕತೆಯನ್ನು ಇಳಿಜಾರಿನಲ್ಲಿ ಸಾಗುವಂತೆ ಮಾಡಿದೆ ಎಂದು ವಿಶ್ವ ಹಣಕಾಸು ಸಂಸ್ಥೆಯ ಮುಖ್ಯಸ್ಥೆ (ಐಎಂಎಫ್) ಕ್ರಿಸ್ಟಲಿನಾ ಜಾರ್ಜಿವಾ ಶುಕ್ರವಾರ ಹೇಳಿದ್ದಾರೆ.
“ನಾವು ಆರ್ಥಿಕ ಕುಸಿತದ ಪರ್ವಕ್ಕೆ ಪ್ರವೇಶಿಸಿದ್ದೇವೆ ಎಂಬುದು ಸ್ಪಷ್ಟವಾಗಿದೆ” ಎಂದಿರುವ ಅವರು, ಇದು 2009 ಜಾಗತಿಕ ಆರ್ಥಿಕ ಬಿಕ್ಕಟ್ಟಿಗಿಂತ ಭೀಕರವಾಗಿರುತ್ತದೆ ಎಂದು ಅವರು ಆನ್ ಲೈನ್ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತುರ್ತು ವ್ಯವಸ್ಥೆ ಒದಗಿಸಲು ಹೆಚ್ಚಿನ ಹಣಕಾಸು ಅಗತ್ಯವಿದ್ದು, 50 ಬಿಲಿಯನ್ ಅಮೆರಿಕನ್ ಡಾಲರ್ ಗಾಗಿ ಅಧಿಕೃತವಾಗಿ ಅವರು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲ ಕಡೆಯೂ ಕೊರೊನಾ ವೈರಾಣು ಹತೋಟಿಗೆ ಬಂದರೆ 2021ನೇ ಇಸವಿಯಲ್ಲಿ ಈಗಿನ ಪರಿಸ್ಥಿತಿಯಿಂದ ಸ್ವಲ್ಪಮಟ್ಟಿಗೆ ಚೇತರಿಸಿಕೊಳ್ಳಬಹುದು. ನಗದು ಸಮಸ್ಯೆ ತಡೆಯಬೇಕು. ಕಡಿಮೆ ಅದಾಯ ಇರುವ 80ಕ್ಕೂ ಹೆಚ್ಚು ರಾಷ್ಟ್ರಗಳಿವೆ. ಅವುಗಳು ತುರ್ತು ನೆರವಿಗಾಗಿ ವಿಶ್ವ ಹಣಕಾಸು ಸಂಸ್ಥೆಯನ್ನು ಕೇಳಿಕೊಂಡಿವೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...

ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣ ಪತ್ತೆ

newsics.com ಜೈಪುರ: ಮಹಾರಾಷ್ಟ್ರದ ಬಳಿಕ ಇದೀಗ ಜೈಪುರದಲ್ಲೂ 9 ಒಮೈಕ್ರಾನ್ ಪ್ರಕರಣಗಳು ದೃಢಪಟ್ಟಿವೆ. ಒಂದೇ ಕುಟುಂಬದವರಲ್ಲಿ ಸೋಂಕು ಪತ್ತೆಯಾಗಿದ್ದು, ಇವರು ದಕ್ಷಿಣ ಆಫ್ರಿಕಾದಿಂದ ಬಂದವರು ಎಂದು ತಿಳಿದುಬಂದಿದೆ. ಮುಂಬೈನಲ್ಲಿ ಇಂದು ಒಂದೇ ದಿನ 7 ಜನರಿಗೆ...
- Advertisement -
error: Content is protected !!