newsics.com
ಕರಾಚಿ(ಪಾಕಿಸ್ತಾನ): ಬಲ್ಡಿಯಾ ನಗರದಲ್ಲಿ ಟ್ರಕ್ ಮೇಲೆ ಮೋಟಾರ್ ಸೈಕಲ್ ನಲ್ಲಿ ಬಂದ ದುಷ್ಕರ್ಮಿಗಳು ನಡೆಸಿದ ಗ್ರೆನೇಡ್ ದಾಳಿಯಲ್ಲಿ ನಾಲ್ವರು ಮಕ್ಕಳು ಸೇರಿ ಸುಮಾರು 10 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ದಾಳಿ ವೇಳೆ ಹಲವರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ವುವ ಸಾಧ್ಯತೆಯಿದೆ.
ಕರಾಚಿಯ ಬಲ್ಡಿಯಾ ನಗರದ ಮಾವಾಚ್ ಗೋತ್ ಪ್ರದೇಶದ ಬಳಿ ಟ್ರಕ್ ಮೇಲೆ ಗ್ರೆನೇಡ್ ದಾಳಿ ನಡೆಸಲಾಗಿದ್ದು, ಪ್ರಾಥಮಿಕ ತನಿಖೆಯ ಮೂಲಕ ಇದೊಂದು ಗ್ರೆನೇಡ್ ದಾಳಿ ಎಂದು ಗೊತ್ತಾಗಿದೆ ಎಂದು ಭಯೋತ್ಪಾದನೆ ನಿಗ್ರಹ ಇಲಾಖೆಯ (ಸಿಟಿಡಿ) ಹಿರಿಯ ಅಧಿಕಾರಿ ರಾಜಾ ಉಮರ್ ಖಟ್ಟಾಬ್ ಸ್ಪಷ್ಟಪಡಿಸಿದ್ದಾರೆ.
ಮೃತದೇಹಗಳನ್ನು ಡಾ.ರುತ್ ಪ್ಫೌ ಸಿವಿಲ್ ಆಸ್ಪತ್ರೆಗೆ ತರಲಾಗಿದೆ. ಗ್ರೆನೇಡ್ ದಾಳಿಯಲ್ಲಿ ಆರು ಮಹಿಳೆಯರು ಮತ್ತು 4 ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಇತರ 10 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವ: ಒಂದೂವರೆ ಕೋಟಿ ಭಾರತೀಯರಿಂದ ರಾಷ್ಟ್ರಗೀತೆ
ಮಧ್ಯರಾತ್ರಿ ಬಂದ ಸ್ವಾತಂತ್ರ್ಯವನ್ನು ಹಗಲಿರುಳೂ ಕಾಯೋಣ: ಸಿಎಂ ಬೊಮ್ಮಾಯಿ
ಹಿರಿಯ ಯಕ್ಷಗಾನ ಪ್ರಸಂಗಕರ್ತ, ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಇನ್ನಿಲ್ಲ