newsics.com
ಪ್ಯಾರಿಸ್: ಖ್ಯಾತ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ಗೆ ಫ್ರೆಂಚ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಿದೆ. ಎಕೋಲ್ ಸೂಪರ್ ಯೂರ್ ರಾಬರ್ಟ್ ಡಿ ಸೊಬೊರ್ನ್ ವಿಶ್ವ ವಿದ್ಯಾಲಯ ಈ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಕ್ರಿಕೆಟ್ ಗೆ ಹರ್ಭಜನ್ ಸಿಂಗ್ ನೀಡಿದ ಕೊಡುಗೆ ಪರಿಗಣಿಸಿ ಈ ಗೌರವ ನೀಡಲಾಗಿದೆ.
ಐಪಿಎಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಸದಸ್ಯರಾಗಿ ಹರ್ಭಜನ್ ಆಟವಾಡುತ್ತಿದ್ದಾರೆ.
ವಿಡಿಯೋ ಸಂವಾದದ ಮೂಲಕ ಹರ್ಭಜನ್ ಸಿಂಗ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.