newsics.com
ಬೀಜಿಂಗ್: ಮಧ್ಯ ಚೀನಾದ ಹುಬೆ ಪ್ರಾಂತ್ಯದ ಪಟ್ಟಣದಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಬುಧವಾರದಿಂದ ಗುರುವಾರದವರೆಗೆ ಸುರಿದ ಭಾರೀ ಮಳೆಯಿಂದಾಗಿ 21 ಜನರು ಮೃತಪಟ್ಟಿದ್ದಾರೆ. ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಲಿಯುಲಿನ್ ಟೌನ್ ಶಿಪ್ ನಲ್ಲಿ ಬುಧವಾರ ರಾತ್ರಿ 9 ಗಂಟೆಯಿಂದ ಭಾರೀ ಮಳೆ ಸುರಿಯುತ್ತಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ ಪಟ್ಟಣ ಸಂಪೂರ್ಣ ಜಲಾವೃತವಾಗಿದೆ. 21 ಜನರು ಮಳೆಯಿಂದ ಮೃತಪಟ್ಟಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.