newsics.com
ಡಾಕರ್(ಸೆನೆಗಲ್): ಡಾಕರ್ ಬಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ 11 ನವಜಾತ ಶಿಶುಗಳು ಸಾವನ್ನಪ್ಪಿವೆ.
ಸೆನೆಗಲ್ ಅಧ್ಯಕ್ಷ ಮ್ಯಾಕಿ ಸಾಲ್ ಈ ಮಾಹಿತಿ ನೀಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, 11 ಹಸುಗೂಸುಗಳು ಮೃತಪಟ್ಟಿವೆ ಎಂದು ಅಧ್ಯಕ್ಷ ಮ್ಯಾಕಿ ಸಾಲ್ ಅವರು ಟ್ವೀಟ್ ಮಾಡಿದ್ದಾರೆ.
ಟಿವೌವಾನ್ನ ಸಾರಿಗೆ ಕೇಂದ್ರದಲ್ಲಿರುವ ಮಾಮ್ ಅಬ್ದೌ ಅಜೀಜ್ ಸೈ ದಬಾಖ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂರು ಶಿಶುಗಳನ್ನು ರಕ್ಷಿಸಲಾಗಿದೆ ಎಂದು ನಗರದ ಮೇಯರ್ ಡೆಂಬಾ ಡಿಯೋಪ್ ಹೇಳಿದ್ದಾರೆ.
ಮೇಮ್ ಅಬ್ದೌ ಅಜೀಜ್ ಸೈ ದಬಾಖ್ ಆಸ್ಪತ್ರೆ ಇತ್ತೀಚೆಗಷ್ಟೇ ಕಾರ್ಯಾರಂಭ ಮಾಡಿತ್ತು.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,628 ಹೊಸ ಕೋವಿಡ್ ಪ್ರಕರಣ : 18 ಮಂದಿ ಸಾವು
ಶಿಲ್ಪಾ ಸೂಸೈಡ್ ಪ್ರಕರಣಕ್ಕೆ ಟ್ವಿಸ್ಟ್ : ಲವ್ ಜಿಹಾದ್ಗೆ ಬಲಿಯಾದ ಹಿಂದೂ ಯುವತಿ