Monday, November 29, 2021

ಅಮೆರಿಕ ತಲುಪಿದ ಹೈಡ್ರಾಕ್ಸಿಕ್ಲೋರೋಕ್ವಿನ್

Follow Us

ವಾಷಿಂಗ್ಟನ್: ಭಾರತ ಕಳುಹಿಸಿದ್ದ ಕೊರೋನಾ ಸೋಂಕಿನ ಚಿಕಿತ್ಸೆಗೆ ಪೂರಕ ಎಂದು ಪರಿಗಣಿಸಲ್ಪಟ್ಟಿರುವ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧ ಭಾನುವಾರ ಅಮೆರಿಕ ತಲುಪಿದೆ.
ಹೈಡ್ರಾಕ್ಸಿ ಕ್ಲೋರೋಕ್ವಿನ್ ನೆವಾರ್ಕ್ ವಿಮಾನ ನಿಲ್ದಾಣ ತಲುಪಿದೆ ಎಂದು ಅಮೆರಿಕದ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಹೈಡ್ರಾಕ್ಸಿ ಕ್ಲೋರೋಕ್ವಿನ್ ನೀಡುವಂತೆ ಪದೇ ಪದೇ ಬೇಡಿಕೆ ಇಟ್ಟಿದ್ದು ಭಾರತ ಅಪಾರ ಪ್ರಮಾಣದ ಈ ಔಷಧವನ್ನು ನೀಡಿದೆ. ಸದ್ಯ ಭಾರತದಲ್ಲಿ ಪ್ರತಿದಿನ 20 ಕೋಟಿ ಮಾತ್ರೆಗಳನ್ನು ಉತ್ಪಾದಿಸಬಹುದಾಗಿದೆ. ಹೀಗಾಗಿ ತನ್ನ ಅಗತ್ಯಕ್ಕೆ ಬಳಸಿಕೊಂಡು ಭಾರತ 25ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಹೈಡ್ರಾಕ್ಸಿ ಕ್ಲೋರೋಕ್ವಿನ್ ಪೂರೈಸಲು ಸಮ್ಮತಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!