Wednesday, October 5, 2022

ನಾನು ಎಲ್ಲ ಅಮೆರಿಕನ್ನರ ಅಧ್ಯಕ್ಷನಾಗುವೆ: ಬಿಡೆನ್ ಟ್ವೀಟ್

Follow Us

Newsics.com

ವಾಷಿಂಗ್ಟನ್:  ಅಮೆರಿಕದ ನೂತನ ಅಧ್ಯಕ್ಷರೆಂದೇ ಬಿಂಬಿತರಾಗಿರುವ ಜೊ ಬಿಡೆನ್ ಸಾಮಾಜಿಕ ಜಾಲ ತಾಣ ಟ್ವೀಟರ್ ಮೂಲಕ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ. ನಾನು ಎಲ್ಲರಿಗೂ ಆಭಾರಿಯಾಗಿದ್ದೇನೆ. ಮುಂದಿನ ಹಾದಿ ಕಠಿಣವಾಗಿದೆ. ಆದರೆ ನಾನು ಭರವಸೆ ನೀಡುತ್ತಿದ್ದೇನೆ.. ನಾನು ಎಲ್ಲ ಅಮೆರಿಕನ್ನರ  ಅಧ್ಯಕ್ಷನಾಗಿರುತ್ತೇನೆ.. ನನಗೆ ಮತ ನೀಡಿದವರು  ಮತ್ತು ನೀಡದವರ ಪ್ರತಿನಿಧಿಯಾಗಿರುತ್ತೇನೆ.

ನೀವು ನನ್ನಲ್ಲಿ ಇಟ್ಟಿರುವ ವಿಶ್ವಾಸವನ್ನು ನಾನು ಉಳಿಸಿಕೊಳ್ಳುತ್ತೇನೆ ಎಂದು ಬಿಡೆನ್ ವಿನೀತರಾಗಿ ಹೇಳಿದ್ದಾರೆ.

ಅಮೆರಿಕದ 46ನೇ ಅಧ್ಯಕ್ಷರಾಗಿ ಬಿಡೆನ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.  ಕೊರೋನಾ ಮಹಾಮಾರಿಯಿಂದ ಆಮೆರಿಕದ ಆರ್ಥಿಕತೆ ಕುಸಿದಿದ್ದು, ಇದರ ಚೇತರಿಕೆಗಾಗಿ ಕ್ರಾಂತಿಕಾರಿ ಕ್ರಮ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ.

ಅಮೆರಿಕದಲ್ಲಿ ನಿರುದ್ಯೋಗ ಸಮಸ್ಯೆ ಕೂಡ ಹೆಚ್ಚಾಗಿದೆ. ಇದು ನೂತನ ಆಡಳಿತಕ್ಕೆ ಸವಾಲು ತಂದೊಡ್ಡಲಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...

ಸೌತ್ ಆಫ್ರಿಕಾ ವಿರುದ್ಧ ಭಾರತಕ್ಕೆ ಸೋಲು

newsics.com ನವದೆಹಲಿ: ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ ಕೊನೆಯ ಟಿ-20 ಪಂದ್ಯದಲ್ಲಿ ಭಾರತ ಸೋಲು ಕಂಡಿದೆ. 227 ರನ್​​​ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಇಂಡಿಯಾ ಆರಂಭದಿಂದಲೇ ಮುಗ್ಗರಿಸಿತು. ದಿನೇಶ್ ಕಾರ್ತಿಕ್ 46 ರನ್​ ಹಾಗೂ...
- Advertisement -
error: Content is protected !!