newsics.com
ಜಕಾರ್ತ: ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪಕದಿಂದ ಸಾವನ್ನಪ್ಪಿದವರ ಸಂಖ್ಯೆ 310ಕ್ಕೆ ಏರಿದೆ. 24 ಮಂದಿ ನಾಪತ್ತೆಯಾಗಿದ್ದು ಅವರ ಪತ್ತೆಗೆ ಶೋಧ ಮುಂದುವರಿದಿದೆ.
ನವೆಂಬರ್ 21ರಂದು ಇಂಡೋನೇಷ್ಯಾದ ಪ್ರಮುಖ ದ್ವೀಪ ಜಾವಾದಲ್ಲಿ ಭೂಕಂಪನ ಸಂಭವಿಸಿತ್ತು. ಸಿಯಾಂಚೂರ್ ಎಂಬಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಮನೆಗಳು ನೆಲಸಮವಾಗಿದ್ದವು.
ಭೂಕಂಪದಿಂದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮೃತಪಟ್ಟಿದ್ದಾರೆ. ಶಾಲೆ ಮುಗಿದ ಬಳಿಕ ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದ ಮಕ್ಕಳು ಭೂಕಂಪದಿಂದ ಪ್ರಾಣ ಕಳೆದುಕೊಂಡಿದ್ದಾರೆ.