Thursday, December 8, 2022

ಇಂಡೋನೇಷ್ಯಾ ಭೂಕಂಪ: ಮೃತರ ಸಂಖ್ಯೆ 271ಕ್ಕೆ ಏರಿಕೆ

Follow Us

newsics.com

ಜಕಾರ್ತ:  ಇಂಡೋನೇಷ್ಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 271ಕ್ಕೆ ಏರಿದೆ. ಸಾವಿನ ಸಂಖ್ಯೆ  ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.  ಇದೇ ವೇಳೆ ಅವಶೇಷಗಳಡಿಯಲ್ಲಿ ಸಿಲುಕಿದ್ದ ಆರು ವರ್ಷ ಪ್ರಾಯದ ಮಗುವನ್ನು ರಕ್ಷಿಸಲಾಗಿದೆ. ಮಗುವಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವನ್ನಪ್ಪಿದವರಲ್ಲಿ    ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಶಾಲಾ ತರಗತಿ ಮುಗಿದ ಬಳಿಕ ವಿದ್ಯಾರ್ಥಿಗಳು ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಭೂಕಂಪನ ಸಂಭವಿಸಿತ್ತು

ಇಂಡೋನೇಷ್ಯಾದ ಮುಖ್ಯ ದ್ವೀಪ ಜಾವದಲ್ಲಿ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ  5.6 ದಾಖಲಾಗಿತ್ತು.

ಈ ಮಧ್ಯೆ ಭಾರತದ ಮೇಘಾಲಯದಲ್ಲಿ ಇಂದು ಮುಂಜಾನೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.4ರಷ್ಟು ದಾಖಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!