ಸೌದಿ ಅರೇಬಿಯಾ: ಸೌದಿ ರಾಜನ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಉಡುಪಿ ಜಿಲ್ಲೆಯ ಕೋಟೇಶ್ವರದ ಯುವಕ ಹರೀಶ್ ಬಂಗೇರನನ್ನು ಸೌದಿ ಪೊಲೀಸರು ಬಂಧಿಸಿದ್ದಾರೆ.
ಈತ ತನ್ನ ಫೇಸ್ ಬುಕ್ ನಲ್ಲಿ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಬಗ್ಗೆ ಪೋಸ್ಟ್ ಮಾಡಿದ್ದಾನೆ. ಇದಕ್ಕೆ ಅಲ್ಲಿನ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ಹರೀಶ್ ಕ್ಷಮೆ ಕೋರಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
ಆದರೆ ಯಾರೋ ಕಿಡಿಗೇಡಿಗಳು ಹರೀಶ್ ಬಂಗೇರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಮೆಕ್ಕಾ, ಮದೀನ, ಸೌದಿ ರಾಜನ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ. ಈ ಆರೋಪದ ಮೇಲೆ ಸೌದಿ ಪೊಲೀಸರು ಹರೀಶ್ ಬಂಗೇರ ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಸೌದಿ ದೊರೆ ಅವಹೇಳನ, ಉಡುಪಿ ಯುವಕ ಬಂಧನ
Follow Us