Tuesday, April 13, 2021

ಜಪಾನ್ ನಲ್ಲಿ ತುರ್ತು ಪರಿಸ್ಥಿತಿ ಹಿಂತೆಗೆತ

ಟೋಕಿಯೋ:  ಕೊರೋನಾ ತಡೆಗಟ್ಟಲು ಹೇರಲಾಗಿದ್ದ ತುರ್ತು ಪರಿಸ್ಥಿತಿಯನ್ನು ಜಪಾನ್ ರದ್ದು ಪಡಿಸಿದೆ. ದೇಶವನ್ನು ಉದ್ದೇಶಿಸಿ ಮಾತನಾಡಿದ ಜಪಾನ್ ಪ್ರಧಾನಿ ಶಿಜೋ ಅಬೆ ಈ  ನಿರ್ಧಾರ  ಪ್ರಕಟಿಸಿದರು. ಏಪ್ರಿಲ್ 7ರಂದು ಜಪಾನ್ ನಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿತ್ತು. ತುರ್ತು ಪರಿಸ್ಥಿತಿ ಹಿಂತೆಗೆಯಲು ಕಠಿಣ ಮಾನದಂಡಗಳನ್ನು ನಿಗದಿಪಡಿಸಲಾಗಿತ್ತು. ಇದೀಗ ಈ ಎಲ್ಲ ಮಾನದಂಡಗಳನ್ನು ಪಾಲಿಸಲಾಗಿರುವ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ರದ್ದುಪಡಿಸುವುದಾಗಿ ಅಬೆ ಘೋಷಿಸಿದರು.  ಜಪಾನ್ ನಾಗರಿಕರು ತಮ್ಮದೇ ಆದ ಶೈಲಿ ಅಳವಡಿಸಿಕೊಂಡು ಕೊರೋನಾ ವಿರುದ್ದ ಜಯಗಳಿಸಿದ್ದಾರೆ. ಆದರೂ ಮುಂದಿನ ದಿನಗಳಲ್ಲಿ ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಅವರು ಕಿವಿಮಾತು ಹೇಳಿದರು. ಜಪಾನ್ ನಲ್ಲಿ 16 581 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದರು. 830 ಮಂದಿ ಜಪಾನ್ ನಲ್ಲಿ ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!