ಅಮೆರಿಕ ಚುನಾವಣೆ: ಗೆಲುವಿನತ್ತ ಜೊ ಬೈಡನ್

NEWSICS.COM ಯುಎಸ್: ಎಲ್ಲೆಡೆ ತೀವ್ರ ಕುತೂಹಲ ಕೆರಳಿಸಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಣಾಹಣಿ ಕೊನೆಯ ಹಂತ ತಲುಪುತ್ತಿದೆ. ಡೆಮೋಕ್ರಾಟಿಕ್ ಪಕ್ಷದ ಜೋ ಬೈಡನ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತವಾಗುತ್ತಿದೆ. ಈಗ ಜಾರ್ಜಿಯಾದಲ್ಲೂ ಡೊನಾಲ್ಡ್ ಟ್ರಂಪ್ ವಿರುದ್ಧ ಮುನ್ನಡೆ ಸಾಧಿಸಿದ ಬಿಡನ್ ಗೆಲುವಿನ ಹಾದಿಯಲ್ಲಿದ್ದಾರೆ. ಮಿಚಿಗನ್ ಮತ್ತು ವಿಸ್ಕೊನ್ಸಿನ್ ಗಳಲ್ಲಿ ಗೆಲುವು ಸಾಧಿಸಿದ್ದ ಜೊ ಬೈಡನ್ ಅವರು ಈಗ ಜಾರ್ಜಿಯಾದಲ್ಲೂ ಡೊನಾಲ್ಡ್ ಟ್ರಂಪ್ ವಿರುದ್ಧ 917 ಮತಗಳ ಮುನ್ನಡೆ ಸಾಧಿಸಿದ್ದಾರೆ ಎನ್ನಲಾಗಿದೆ.